News Karnataka Kannada
Friday, April 26 2024
ಹುಬ್ಬಳ್ಳಿ-ಧಾರವಾಡ

ಧಾರವಾಡ :ಎಸ್ ಡಿಎಂ ಕಾಲೇಜಿನಲ್ಲಿ 300 ಕೊರೊನಾ ಸೋಂಕು ಪತ್ತೆ

Corona Main Newsk 5059978686
Photo Credit :

ಧಾರವಾಡ : ರಾಜ್ಯದಲ್ಲಿ ಕೊರೊನಾ 3 ನೇ ಅಲೆ  ಆತಂಕ ಮನೆ ಮಾಡಿದ್ದು, ಧಾರವಾಡದ ಎಸ್ ಡಿಎಂ ಕಾಲೇಜಿನಲ್ಲಿ ಕೊರೊನಾ ಸ್ಪೋಟವಾಗಿದ್ದು, ಈವರೆಗೆ ಒಟ್ಟು 300 ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಕೇರಳದ ಇಬ್ಬರು ಹಾಗೂ ಮಹಾರಾಷ್ಟ್ರದ ಒಬ್ಬ ವಿದ್ಯಾರ್ಥಿ ಸೇರಿದಂತೆ ಮೂವರು ವಿದ್ಯಾರ್ಥಿಗಳಿಂದಲೇ ಎಸ್ ಡಿಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ. ತಮ್ಮ ಊರಿಗೆ ಹೋಗಿದ್ದ ವಿದ್ಯಾರ್ಥಿಗಳು ಕಾಲೇಜಿಗೆ ಬಂದು ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಹೀಗಾಗಿ ಎಲ್ಲರಿಗೂ ಸೋಂಕು ತಗುಲಿದೆ ಎಂದು ಧಾರವಾಡ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಎಸ್ ಡಿಎಂ ಕಾಲೇಜಿನಲ್ಲಿ ಮೊದಲು 66 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿತ್ತು. ಬಳಿಕ 182 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿತ್ತು. ಇದೀಗ ಒಟ್ಟು 306 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು