News Karnataka Kannada
Saturday, April 27 2024
ಹುಬ್ಬಳ್ಳಿ-ಧಾರವಾಡ

ಪುಂಡರನ್ನು ಮಟ್ಟಹಾಕಲು ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ :ಸಿಎಂ ಬೊಮ್ಮಾಯಿ

Basavaraj Cm
Photo Credit :

ಹುಬ್ಬಳ್ಳಿ: ಬೆಳಗಾವಿಯಲ್ಲಿ ಶುಕ್ರವಾರ ತಡರಾತ್ರಿ ನಡೆದ ಪುಂಡಾಟಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಪುಂಡರನ್ನು ಮಟ್ಟಹಾಕಲು ಕಠಿಣ ಕ್ರಮಕ್ಜೆ ಸೂಚಿಸಿದ್ದೇನೆ,ರಾಷ್ಟ್ರ ನಾಯಕರ ಪ್ರತಿಮೆಗಳಿಗೆ ಗೌರವ ನೀಡಬೇಕು. ಅದರ ಬದಲು ಪ್ರತಿಮೆಗಳನ್ನು ಅವಮಾನಿಸುವ ಮೂಲಕ ಸಮಾಜದಲ್ಲಿ ಕ್ಷೋಭೆ ಸೃಷ್ಟಿಸಲು ಮುಂದಾದರೆ ಅಂತಹ ಯತ್ನಗಳಿಗೆ ಅವಕಾಶ ನೀಡುವುದಿಲ್ಲ ಎಂದರು. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶನಿವಾರ ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ನಾಯಕರ ಪ್ರತಿಮೆಗಳನ್ನು ಅವಮಾನ ಮಾಡುವುದನ್ನು ಸಹಿಸಿಕೊಳ್ಳಲಾಗದು.ಘಟನೆಗೆ ಸಂಬಂಧಿಸಿದಂತೆ ಕಠಿಣ ಕ್ರಮಕ್ಕೆ ಹಾಗೂ ಇಂತಹ ಘಟನೆಗಳು,ಪುನಃ ನಡೆಯದಂತೆ ಪೊಲೀಸರು ದೀರ್ಘಾವಧಿ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ ಎಂದರು.

 

ಬೆಳಗಾವಿ ಘಟನೆಗೆ ಸಂಬಂಧಿಸಿದಂತೆ ಕೆಲವರನ್ನು ಬಂಧಿಸಲಾಗಿದೆ. ಬೆಳಗಾವಿಯಲ್ಲಿ ಅಧಿವೇಶನ ನಡೆಯುವ ವೇಳೆ ಇಂತಹ ಘಟನೆ ನಡೆಯುವುದರ ಹಿಂದೆ ಹಲವಾರು ಕಾರಣಗಳು ಇರಬಹುದು ಇದೆಲ್ಲದರ ಬಗ್ಗೆಯೂ ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು