News Kannada
Wednesday, November 30 2022

ಹುಬ್ಬಳ್ಳಿ-ಧಾರವಾಡ

ತಂದೆ -ತಾಯಿ ಅವರ ಸಮಾಧಿಗೆ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ - 1 min read

Photo Credit :

ಹುಬ್ಬಳ್ಳಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿಸ ಬಸವರಾಜ ಬೊಮ್ಮಾಯಿ ಅವರು , ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಧ್ಯೆ ಅಮರಗೋಳದಲ್ಲಿರುವ ಮಾತೋಶ್ರೀ ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ,ಮಾಜಿಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಿ ,ಗೌರವ ಸಮರ್ಪಿಸಿದರು.

ತಂದೆ -ತಾಯಿಯ ಸಮಾಧಿಗೆ ಪ್ರದಕ್ಷಿಣೆ ಹಾಕಿ ಕೆಲನಿಮಿಷ ಮೌನವಾಗಿ ಸ್ಮರಣೆ ಮಾಡಿದರು.ಉಭಯ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು.

ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ ತಂದೆ ,ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು ಅಧಿಕಾರ ಸ್ವೀಕರಿಸಿದ ನಂತರ ಅವರ ಸಮಾಧಿಗಳ ದರ್ಶನ ಪಡೆದಿರುವೆ ಎಂದರು.

ಶಾಸಕರಾದ ಅಮೃತ ದೇಸಾಯಿ, ಮಾಜಿ ಸಚಿವ ,ಶಾಸಕ ಶಿವರಾಮ್ ಹೆಬ್ಬಾರ , ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಧಾರವಾಡ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಮಲ್ಲಿಕಾರ್ಜುನ ಹೊರಕೇರಿ ಸೇರಿದಂತೆ ,ಕುಟುಂಬದ ಬಂಧುಗಳು, ರಾಜಕೀಯ ಪಕ್ಷಗಳ ಮುಖಂಡರು,ಅಭಿಮಾನಿಗಳು ನೆರೆದಿದ್ದರು.

See also  ರಾಜ್ಯದಲ್ಲಿ 15 ಸ್ಥಾನ ಬಿಜೆಪಿ ಜಯ ನಿಶ್ಚಿತ: ಮಾಜಿ ಸಿಎಂ ಜಗದೀಶ ಶೆಟ್ಟರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು