ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಮಟ್ಟದಲ್ಲಿ ಭಾರಿ ಭ್ರಷ್ಟಾಚಾರ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಿ ನೂತನ ಮುಖ್ಯಮಂತ್ರಿಯನ್ನು ನೇಮಕ ಮಾಡಿ ತನ್ನ ಕೆಲಸ ಮುಗಿಯಿತೆಂದು ಕೈತೊಳೆದಿದೆ ಎಂದು ಲೇವಡಿ ಮಾಡಿದರು.
ಹೈಕಮಾಂಡ್ ಏಕಾಏಕಿ ನಾಯಕತ್ವ ಬದಲಾವಣೆ ಮಾಡಿದ್ದರಿಂದ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಕೊಡುವ ಸಂದರ್ಭದಲ್ಲಿ ಕಣ್ಣೀರು ಹಾಕಿದರು ಎಂದು ಡಿಕೆ ಶಿವಕುಮಾರ್ ತಿಳಿಸಿದರು.