ಧಾರವಾಡ: ಜಿಲ್ಲೆಯಲ್ಲಿ 6 ಜನರಿಗೆ ಕೊರೊನಾ ಕಾಣಿಸಿಕೊಂಡಿದ್ದು, ಈವರೆಗೂ ಒಟ್ಟು 61,447 ಜನರಿಗೆ ಸೋಂಕು ದೃಢಪಟ್ಟಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಸೋಂಕಿನಿಂದ ಇಂದು 19 ಜನರು ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.
ಈವರೆಗೂ 60,078 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1,323 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 44 ಸಕ್ರಿಯ ಪ್ರಕರಣಗಳಿವೆ.