News Kannada
Tuesday, October 04 2022

ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಕೊರೊನಾ ಸೋಂಕು ತಗುಲಿದ್ದ ಮಕ್ಕಳಿಗೆ ಮನೆಯಲ್ಲೇ ಚಿಕಿತ್ಸೆ - 1 min read

Photo Credit : IANS

ಹುಬ್ಬಳ್ಳಿ : ಕೋವಿಡ್‍ ಮೂರನೇ ಅಲೆ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಜಿಲ್ಲೆಯ 587 ಮಕ್ಕಳಲ್ಲಿ ಕೋವಿಡ್‍ ದೃಢಪಟ್ಟಿದೆ. ಜ.8ರಿಂದ ಈವರೆಗೆ ಜಿಲ್ಲೆಯ 8,831 ಮಕ್ಕಳನ್ನು ಕೋವಿಡ್‍ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ 587 ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ. ಬಾಧಿತ ಮಕ್ಕಳು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ಯಾವುದೇ ಗಂಭೀರ ಪ್ರಕರಣ ಕಂಡುಬಂದಿಲ್ಲ ಎಂಬುದು ಜಿಲ್ಲಾ ಆರೋಗ್ಯ ಇಲಾಖೆಯ ಮಾಹಿತಿ.

ಮನೆಯಲ್ಲೇ ಚಿಕಿತ್ಸೆ: ‘ಕೋವಿಡ್‍ ಬಾಧಿತ ಮಕ್ಕಳಲ್ಲಿ ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ. ಆದರೂ, ಹುಬ್ಬಳ್ಳಿಯ ಕಿಮ್ಸ್‌ನ ಐಸಿಯುನಲ್ಲಿ 20 ಹಾಸಿಗೆ ಹಾಗೂ ಆಮ್ಲಜನಕಯುಕ್ತ 80 ಹಾಸಿಗೆಗಳನ್ನು ಚಿಕಿತ್ಸೆಗಾಗಿ ಸಿದ್ಧಪಡಿಸಲಾಗಿದೆ. ಮೊದಲ ಅಲೆಯ ವೇಳೆ 65 ಮಕ್ಕಳು ಕೋವಿಡ್‍ ಬಾಧಿತರಾಗಿದ್ದರೆ, ಇತರೆ ಆರೋಗ್ಯ ಸಮಸ್ಯೆಯಿಂದ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ಎರಡನೇ ಅಲೆಯಲ್ಲಿ 20 ಮಕ್ಕಳು ಚಿಕಿತ್ಸೆ ಪಡೆದು, ಮನೆಗೆ ತೆರಳಿದ್ದರು’ ಎಂದು ಕಿಮ್ಸ್‌ ಮಕ್ಕಳ ವಿಭಾಗದ ಮುಖ್ಯಸ್ಥ ಪ್ರಕಾಶ ವಾರಿ ತಿಳಿಸಿದರು.

‘ವಾತಾವರಣ ವ್ಯತ್ಯಾಸದಿಂದ ಶೀತ, ಕೆಮ್ಮು, ಜ್ವರದ ಸಮಸ್ಯೆಯಿಂದ ಹೆಚ್ಚಿನ ಮಕ್ಕಳು ಬಳಲುತ್ತಿದ್ದಾರೆ. ಅಂಥವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ಮಕ್ಕಳು ನ್ಯಮೋನಿಯಾದಿಂದ ಬಳಲುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕೋವಿಡ್‍ ನಿಮಯಗಳ ಪಾಲನೆ, ಎರಡು ಡೋಸ್‍ ಲಸಿಕೆ ಪಡೆಯುವುದು, ಪೌಷ್ಟಿಕ ಆಹಾರ ಸೇವನೆ, ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದರೆ ವೈದ್ಯರನ್ನು ಕಾಣಬೇಕು. ಪಾಲಕರು ಹೆಚ್ಚಿನ ಜಾಗೃತಿ ವಹಿಸಬೇಕು’ ಎಂದು ಸಲಹೆ ನೀಡಿದರು.

See also  ಹುಬ್ಬಳ್ಳಿ: ಕಾಡಸಿದ್ದೇಶ್ವರ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಲ್ಲಿ ಕೊರೊನಾ ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು