News Kannada
Wednesday, December 07 2022

ಹುಬ್ಬಳ್ಳಿ-ಧಾರವಾಡ

ಲಾರಿ-ಪ್ರಯಾಣಿಕ ಬಸ್ ನಡುವೆ ಭೀಕರ ಅಪಘಾತ: 8 ಮಂದಿ ಸಾವು

Four killed in accident between truck and car
Photo Credit :

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಂಗಳವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಮತ್ತು ಪ್ರಯಾಣಿಕ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಲಾರಿ, ಖಾಸಗಿ ಬಸ್ ಮುಖಾಮುಖಿಯಾಗಿ 8 ಮಂದಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ  ತಾರಿಹಾಳ ಬೈಪಾಸ್​ನಲ್ಲಿ ಸಂಭವಿಸಿದೆ.

ತೀವ್ರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಗಾಯಗೊಂಡಿರುವ 25 ಮಂದಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಕೊಲ್ಹಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ನ್ಯಾಷನಲ್ ಟ್ರಾವೆಲ್ಸ್​ ಬಸ್,​ ಅಕ್ಕಿ ಸಾಗಣೆ ಮಾಡುತ್ತಿದ್ದ ಲಾರಿಗೆ ಮುಖಾಮುಖಿಯಾಗಿತ್ತು. ಲಾರಿಯಲ್ಲಿದ್ದ ಚಾಲಕ, ಕ್ಲೀನರ್ ಸೇರಿದಂತೆ ಮೂವರು ಮೃತಪಟ್ಟರು. ಖಾಸಗಿ ಬಸ್​ನಲ್ಲಿದ್ದ ನಾಲ್ವರು ಮೃತಪಟ್ಟರು. ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ-ಧಾರವಾಡದ ಪೊಲೀಸ್ ಆಯುಕ್ತ ಲಾಬೂರಾವ್ ಭೇಟಿ ನೀಡಿ, ಗಾಯಾಳುಗಳಿಗೆ ಸಾಂತ್ವನ ಹೇಳಿದರು.

ನ್ಯಾಷನಲ್ ಟ್ರಾವೆಲ್ಸ್​ ಬಸ್ ಚಾಲಕರಾದ ಅತಾವುಲ್ಲಾ, ನಾಗರಾಜು, ಪ್ರಯಾಣಿಕರಾದ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಬಾಬುಸಾಬ್ (55), ಮೈಸೂರಿನ ಮೊಹಮ್ಮದ್ ದಯಾನ್ (17) ಸೇರಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಯಲ್ಲಿ 25 ಜನರಿಗೆ ಚಿಕಿತ್ಸೆ ಮುಂದುವರಿದಿದೆ. ಅಪಘಾತದಿಂದ ನಜ್ಜುಗುಜ್ಜಾಗಿರುವ ಎರಡೂ ವಾಹನಗಳನ್ನು ಪೊಲೀಸರು ತೆರವುಗೊಳಿಸಿ, ವಾಹನ ಓಡಾಟಕ್ಕೆ ಅನುವು ಮಾಡಿಕೊಟ್ಟರು.

 

See also  ಹುಬ್ಬಳ್ಳಿ: ಬಸ್ ಗಾಗಿ ಕಾಯುತ್ತಿರುವ ಜನ ಸುಸ್ತು : ಸರ್ಕಾರದ ವಿರುದ್ಧ ಗರಂ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು