News Kannada
Tuesday, February 07 2023

ಹುಬ್ಬಳ್ಳಿ-ಧಾರವಾಡ

ಲಾರಿ ಹಾಗೂ ಖಾಸಗಿ ಬಸ್‌ ನಡುವೆ ಅಪಘಾತ: 8ಜನ ದುರ್ಮರಣ

acccident
Photo Credit :

ಹುಬ್ಬಳ್ಳಿ: ಕರ್ನಾಟಕದ ಹುಬ್ಬಳ್ಳಿ ನಗರದ ಹೊರವಲಯದಲ್ಲಿ ಖಾಸಗಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಎಂಟು ಜನ ಸಾವನ್ನಪ್ಪಿದ್ದು, ಒಟ್ಟು 26 ಮಂದಿ ಗಾಯಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಕೊಲ್ಹಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ನ್ಯಾಷನಲ್‌ ಟ್ರಾವೆಲ್ಸ್‌  ಬಸ್‌ಗೆ ಮಧ್ಯರಾತ್ರಿ 12:30 ರಿಂದ 1 ರ ನಡುವೆ ಹುಬ್ಬಳ್ಳಿಯ ತಾರಿಹಾಳ ಬೈಪಾಸ್‌ನಲ್ಲಿ ಲಾರಿ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ-ಧಾರವಾಡದ ಪೊಲೀಸ್ ಆಯುಕ್ತ ಲಾಬೂರಾವ್ ಭೇಟಿ ನೀಡಿ, ಗಾಯಾಳುಗಳಿಗೆ ಸಾಂತ್ವನ ಹೇಳಿದರು.

ಪರಿಣಾಮ ಲಾರಿಯಲ್ಲಿದ್ದ ಚಾಲಕ, ಕ್ಲೀನರ್ ಸೇರಿದಂತೆ ಮೂವರು, ನ್ಯಾಷನಲ್ ಟ್ರಾವೆಲ್ಸ್​ ಬಸ್ ಚಾಲಕರಾದ ಅತಾವುಲ್ಲಾ, ನಾಗರಾಜು, ಪ್ರಯಾಣಿಕರಾದ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಬಾಬುಸಾಬ್ (55), ಮೈಸೂರಿನ ಮೊಹಮ್ಮದ್ ದಯಾನ್ (17) ಸೇರಿ ಒಟ್ಟು ಎಂಟು ಮಂದಿ ಮೃತಪಟ್ಟಿದ್ದಾರೆ. ಅಪಘಾತದಿಂದ ನಜ್ಜುಗುಜ್ಜಾಗಿರುವ ಎರಡೂ ವಾಹನಗಳನ್ನು ಪೊಲೀಸರು ತೆರವುಗೊಳಿಸಿ, ವಾಹನ ಓಡಾಟಕ್ಕೆ ಅನುವು ಮಾಡಿಕೊಟ್ಟರು.

ಸರಣಿ ಅಪಘಾತದಿಂದ ಈ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ಮುಂದೆ ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದಿದೆ. ಅದರ ಹಿಂದೆ ಬಂದ ಲಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

See also  ಬೆಳ್ತಂಗಡಿ : ಅಪಘಾತದಲ್ಲಿ ಗಾಯಗೊಂಡಿದ್ದ ನಿಡಿಗಲ್ ನಿವಾಸಿ ರಾಜೇಶ್(23) ಮೃತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು