News Kannada
Thursday, August 11 2022

ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳ ನಿಷೇಧಕ್ಕೆ ಕಾಂಗ್ರೆಸ್‌ ಎಂದೂ ಅಡ್ಡಿಯಾಗಿಲ್ಲ - 1 min read

Hubballi: The Congress has never stopped the ban on PFI and SDPI organisations.

ಹುಬ್ಬಳ್ಳಿ: ‘ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳ ನಿಷೇಧಕ್ಕೆ ಕಾಂಗ್ರೆಸ್‌ ಎಂದೂ ಅಡ್ಡಿಯಾಗಿಲ್ಲ. ಮತ ವಿಭಜನೆಗಾಗಿ ಬಿಜೆಪಿಯೇ ಅವುಗಳನ್ನು ಸಾಕಿಕೊಂಡಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಸಂಘಟನೆಯಾದರೂ ಪ್ರಾಣ ತೆಗೆಯಲು ಮುಂದಾದರೆ ಸಹಿಸಲು ಸಾಧ್ಯವಿಲ್ಲ. ಸಂಘಟನೆಗಳ ಮೇಲೆ ಆರೋಪ ಮಾಡುತ್ತ ಕಾಲಹರಣ ಮಾಡದೆ, ಸಾಕ್ಷ್ಯಾಧಾರಗಳಿದ್ದರೆ ನಿಷೇಧಿಸಲು ಮುಂದಾಗಬೇಕು’ ಎಂದು ಆಗ್ರಹಿಸಿದರು.

‘ರಾಜ್ಯ ಗುಪ್ತಚರ ಇಲಾಖೆಯ ವೈಫಲ್ಯದಿಂದ ಮಂಗಳೂರಿನಲ್ಲಿ ಯುವಕರ ಹತ್ಯೆ ನಡೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅದರ ಹೊಣೆ ಹೊರಬೇಕು. ಹತ್ಯೆ ಖಂಡಿಸಿ ಬಿಜೆಪಿಯ ಸಂಘ-ಪರಿವಾರದವರೇ ಪ್ರತಿಭಟನೆ ನಡೆಸಿದ್ದಾರೆ. ಅವರಿಗೇ ರಕ್ಷಣೆ ನೀಡಲು ಸಾಧ್ಯವಿಲ್ಲದ ಸರ್ಕಾರ ಉಳಿದವರಿಗೆ ಹೇಗೆ ನೀಡುತ್ತದೆ? ಇದನ್ನೆಲ್ಲ ನೋಡಿದರೆ ಸರ್ಕಾರ ವಿಫಲವಾಗಿರುವುದು ಸ್ಪಷ್ಟವಾಗುತ್ತಿದೆ. ರಾಜೀನಾಮೆ ನೀಡಿ ಚುನಾವಣೆಗೆ ತೆರಳಲಿ’ ಎಂದು ಹೇಳಿದರು.

‘ಮಂಗಳೂರಿನಲ್ಲಿ ಹತ್ಯೆಯಾದ ಪ್ರವೀಣ್‌ ಮನೆಗೆ ಮುಖ್ಯಮಂತ್ರಿ ತೆರಳಿ ಪರಿಹಾರ ನೀಡುತ್ತಾರೆ. ಆದರೆ ಫಾಸಿಲ್ ಮನೆಗೆ ಹೋಗದೆ ತಾರತಮ್ಯ ಮಾಡಿದ್ದಾರೆ. ಅವರು ಒಂದು ಧರ್ಮದ ಅಥವಾ ವರ್ಗದ ಮುಖ್ಯಮಂತ್ರಿ ಅಲ್ಲ, ಆರೂವರೆ ಕೋಟಿ ಜನರ ಪ್ರತಿನಿಧಿ. ಹತ್ಯೆಯಾದವರ ಕುಟುಂಬದವರಿಗೆ ಪರಿಹಾರ ನೀಡುವ ಪರಿಪಾಠ ಆರಂಭಿಸಿದ್ದೇ ಅವರು, ಹೀಗಿದ್ದಾಗ ಎಲ್ಲರಿಗೂ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.

See also  ಹಿಜಾಬ್ ಸಂಘರ್ಷ ಮುಂದುವರೆದ ಹಿನ್ನೆಲೆ, ವಿಜಯಪುರ, ಹುಬ್ಬಳ್ಳಿ-ಧಾರವಾಡದಲ್ಲಿ 144 ಸೆಕ್ಷನ್ ಜಾರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು