News Kannada
Saturday, October 01 2022

ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ - 1 min read

Dharwad: The act of throwing eggs at Siddaramaiah's car is not justified
Photo Credit : Facebook

ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ಯಾವ ವಿಚಾರವೇ ಇಲ್ಲದಿರುವಾಗ, ಕೆಲ ಆಧಾರ ರಹಿತ ಹೇಳಿಕೆ, ಅನಿಸಿಕೆಗಳಿಗೆ ಮಹತ್ವವೇ ಇಲ್ಲಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಇಲ್ಲ ಎಂಬುದನ್ನು ಈಗಾಗಲೇ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಸ್ಪಷ್ಟ ಪಡಿಸಿದ್ದಾರೆ. ರಾಜ್ಯದಲ್ಲಾಗಲಿ, ಕೇಂದ್ರದಲ್ಲಾಗಲಿ ಈ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ ಎಂದರು.

ದೇಶದಾದ್ಯಂತ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. ದೇಶದ ಸುಮಾರು10 ಕೋಟಿ ಮನೆಗಳ ಮೇಲೆ ಧ್ವಜಾರೋಹಣ ಗುರಿ ಹೊಂದಲಾಗಿದೆ. ಹಲವಾರು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹುಬ್ಬಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಪಾಲಿಕೆ ಸದಸ್ಯರಿಗೆ ನೀಡಲಾದ ರಾಷ್ಟ್ರಧ್ವಜಗಳಲ್ಲಿ ಬಿ.ಎಸ್.ಐ ಸ್ಟ್ಯಾಂಡರ್ಡ್ ನಿಯಮ ಉಲ್ಲಂಘನೆ ಮಾಡಲಾಗಿದೆ. ಅಲ್ಲದೇ ಕಳಪೆ ಮಟ್ಟದ ಧ್ವಜ ವಿತರಣೆ ಮಾಡಿರುವ ಕುರಿತು ತಿಳಿದುಬಂದಿದೆ.

ಈ ಕುರಿತು ಧ್ವಜಗಳನ್ನು ತಯಾರಿಸಿದ ಹಾಗೂ ಅವುಗಳನ್ನು ಪರಿಶೀಲನೆ ಮಾಡದೇ ತೆಗೆದುಕೊಂಡವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ, ಪಾಲಿಕೆ ಆಯುಕ್ತರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದರು.

See also  ನವದೆಹಲಿ: ಪ್ರಧಾನಮಂತ್ರಿಯವರನ್ನು ಭೇಟಿಯಾದ ಏಕನಾಥ್ ಶಿಂಧೆ, ದೇವೇಂದ್ರ ಫಡ್ನವೀಸ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು