News Kannada
Friday, December 09 2022

ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ರಾಹುಲ್ ಗಾಂಧಿ ಮಾತನ್ನು ಗಂಭೀರವಾಗಿ ತೆಗೆದು ಕೊಳ್ಳುವ ಪ್ರಶ್ನೆಯೇ ಇಲ್ಲ

Hubballi: Congress treated Dalits as only vote banks: Pralhad Joshi
Photo Credit : Facebook

ಹುಬ್ಬಳ್ಳಿ: ರಾಹುಲ್ ಗಾಂಧಿ ಅವರ ಮಾತನ್ನು ಗಂಭೀರವಾಗಿ ತೆಗೆದು ಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಅವರು ಅವರು ಗಾಂಧೀಜಿ ಜಯಂತಿ ಅಂಗವಾಗಿ ಕಿಮ್ಸ್ ಆವರಣ ಮುಂಭಾಗದಲ್ಲಿ ಮಹಾತ್ಮಾ ಗಾಂಧಿ ಮೂರ್ತಿಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಹುಲ್ ಗಾಂಧಿಯವರು ಭಾರತ ಜೋಡೋ ಯಾತ್ರೆ ಮುಗಿದ ತಕ್ಷಣ ವಿಶ್ರಾಂತಿಗೆ ವಿದೇಶಕ್ಕೆ ಹೋಗುತ್ತಾರೆ ಎಂದರು‌. ಈಗಾಗಲೇ ಈ ಹಿಂದಿನ ಚುನಾವಣೆಯಲ್ಲಿ ಜನರು ಯಾರು ಯಾರ ಪರ ಇದ್ದಾರೆ ಎಂಬುದನ್ನು ತಮ್ಮ ತೀರ್ಮಾನ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಕೇಂದ್ರದಲ್ಲಿ 10 ವರ್ಷ ನಿರಂತರವಾಗಿ ಭ್ರಷ್ಟಾಚಾರ ಹಗರಣದ್ದೆ ಸುದ್ದಿ ಇತ್ತು ಎಂದರು‌.

ಯಾರ ಕಾಲದಲ್ಲಿ ಹೆಚ್ಚು ಸಾಲ ಆಗಿದೆ ಎಂಬುದನ್ನು ಅಂಕಿ ಅಂಶಗಳಿವೆ. ಕೋವಿಡ್ ಸಮಯದಂತಹ ಪರಿಸ್ಥಿತಿಯನ್ನು ಸರ್ಕಾರ ಯಶಸ್ವಿಯಾಗಿ ನಿಭಾಯಿಸಿದೆ. ಭಾರತ ಅಭಿವೃದ್ಧಿ ಹೊಂದುತ್ತಿದೆ. ಪ್ರಪಂಚವೇ ಭಾರತವನ್ನು ಗುರುತಿಸುವಂತೆ ಆಗಿದೆ. ಹೀಗಾಗಿ ಭಾರತದ ಹಿರಿಮೆ ಗರಿಮೆ ಬಗ್ಗೆ ಸುಳ್ಳು ಅಪಪ್ರಚಾರ ಮಾಡಬಾರದು ಎಂದರು.

See also  ಶಾಸಕರ ನಡುವೆ ಗಲಾಟೆಯಾಗಿಲ್ಲ, ಕ್ಷೇತ್ರದ ಸಮಸ್ಯೆಗಳ ಚರ್ಚೆಯಷ್ಟೇ: ಶಾಸಕ ಜಗದೀಶ ಶೆಟ್ಟರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು