ಧಾರವಾಡ: ಜಲಮಂಡಳಿ ನೌಕರರ ಬಾಕಿ ವೇತನ ಬಿಡುಗಡೆ ಹಾಗೂ ಮರಳಿ ಅವರನ್ನು ಕೆಲಸಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಆಗ್ರಹಿಸಿ ಜಲಮಂಡಳಿ ನೌಕರನೊಬ್ಬ ನಗರ ಜ್ಯುಬಿಲಿ ವೃತ್ತದಲ್ಲಿರುವ ಮೊಬೈಲ್ ಟವರ್ ಏರಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾನೆ.
ಕಳೆದ ಕೆಲವು ದಿನಗಳಿಂದ ಜಲಮಂಡಳಿ ನೌಕರರು ಪಾಲಿಕೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಒಬ್ಬ ನೌಕರ ಏಕಾಏಕಿ ಮೊಬೈಲ್ ಟವರ್ ಏರಿ ಪ್ರತಿಭಟನೆ ನಡೆಸಿದ್ದಾನೆ. ಜ್ಯುಬಿಲಿ ವೃತ್ತದಲ್ಲಿ ಜಲಮಂಡಳಿಯ ಇತರ ನೌಕರರು ಸಹ ಪಾಲಿಕೆ ಹಾಗೂ ಮೇಯರ್ ಈರೇಶ ಅಂಚಟಗೇರಿ ವಿರುದ್ಧ ಪ್ರತಿಭಟನೆ ನಡೆಸಿದರು. ಇನ್ನು ಸ್ಥಳಕ್ಕೆ ಅಗ್ನಿಶಾಮಕ ದಳದವರು ಹಾಗೂ ಪೊಲೀಸರು ಭೇಟಿ ನೀಡಿದ್ದು ಟವರ್ ಏರಿರುವ ಜಲಮಂಡಳಿ ನೌಕರನಿಗೆ ಕೆಳಗೆ ಇಳಿಯುವಂತೆ ಮನವೊಲಿಸಿದ್ದಾರೆ.