ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿಶೇಷ ಗೌರವ ಸೂಚಿಸುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಬಳ್ಳಾರಿಯ ಸಂಡೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗ್ಡೆ ಹಾಗೂ ಪೊಲೀಸ್ ಆಯುಕ್ತ ರಮನ್ ಗುಪ್ತಾ ಸರ್ಕಾರಿ ಗೌರವದೊಂದಿಗೆ ಸ್ವಾಗತಿಸಿದ್ದಾರೆ. ಇನ್ನು ವಿಶೇಷ ವಿಮಾನದ ಮೂಲಕ ಬಂದಿಳಿದ ಅಮಿತ್ ಶಾ ಮತ್ತೇ ವಿಶೇಷ ಹೆಲಿಕಾಪ್ಟರ್ ಮೂಲಕವೇ ಬಳ್ಳಾರಿಯ ಸಂಡೂರಿಗೆ ಪ್ರಯಾಣ ಬೆಳೆಸಿದ್ದಾರೆ.