ಹುಬ್ಬಳ್ಳಿ : ಅವರು ಯಾವ ಸಂದರ್ಭದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಅವರದ್ದು ಇನ್ನೂ ನಿವೃತ್ತಿಯಾಗೋ ವಯಸ್ಸಲ್ಲ. ಇನ್ನೂ ಸೇವೆ ಮಾಡಬೇಕಿದೆ. ಚುನಾವಣೆ ಸಂದರ್ಭದಲ್ಲಿ ಇಂಥವೆಲ್ಲ ನಡೀತಿರುತ್ತೆ. ಜನ ಪ್ರಬುದ್ಧರಾಗಿದ್ದು, ಎಲ್ಲವನ್ನೂ ಗಮನಿಸ್ತಾರೆ ಎಂದು ಮಾಜಿ ಸಿಎಂ ಎಚ್.ಡಿ.ಕೆ. ರಾಜಕೀಯ ನಿವೃತ್ತಿ ವಿಚಾರ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಿಂದ ಚುನಾವಣೆಗೆ ಇನ್ನೂ ಪ್ರಬುದ್ಧರಾಗ್ತಿದಾರೆ. ನಾವು ಮಾತನಾಡುವಾಗ ಅದರ ಹಿಂದಿರೊ ಕಲ್ಪನೆಯೂ ಇರಬೇಕು. ಈಗಾಗಲೇ ಪಕ್ಷ ಬಲವರ್ಧನೆ ನಡೆಯುತ್ತಿದೆ. ಮೋದಿ, ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಮತ್ತೆ ಬರ್ತಾರೆ. ಪಕ್ಷದ ಬಲವರ್ಧನೆ ದೃಷ್ಟಿಯಿಂದ ಹಲವಾರು ನಾಯಕರು ರಾಜ್ಯಕ್ಕೆ ಬರ್ತಾರೆ. ದಾವಣಗೆರೆಯಲ್ಲಿ ಮಾರ್ಚ್ ನಲ್ಲಿ ರಥಯಾತ್ರೆ ಆರಂಭಿಸಲಾಗುವುದು ಎಂದರು.
ಬನವಾಸಿಯಲ್ಲಿ ಸಿಎಂ ಗೋ ಬ್ಯಾಕ್ ವಿಚಾರ ಪ್ರತಿಕ್ರಿಯಿಸಿದ ಅವರು, ನಾಲ್ಕು ಮಂದಿ ಗೋ ಬ್ಯಾಕ್ ಅಂದ್ರೆ ತಲೆಕೆಡಿಸಿಕೊಳ್ಳಲ್ಲ. ಗೋ ಬ್ಯಾಕ್ ಅಭಿಯಾನ ಮಾಮೂಲಿಯಾಗಿದೆ. ಯಡಿಯೂರಪ್ಪ ಜೈಲಿನಲ್ಲಿದ್ದಾಗ ಯಡಿಯೂರಪ್ಪ ಡೈರಿ ಬರೆದ ವಿಚಾರ. ಅವರ ಮಗಳು ಡೈರಿ ಬಿಡುಗಡೆ ಮಾಡೋದು ನನಗೆ ಗೊತ್ತಿಲ್ಲ ಎಂದರು.