ಹುಬ್ಬಳ್ಳಿ: ಕೇಂದ್ರ ಸರ್ಕಾರ ಏಕಾಏಕಿ ಎಲ್‌ಪಿಜಿ ಅನಿಲ ಬೆಲೆ ಏರಿಕೆ ಮಾಡಿದ್ದನ್ನು ಖಂಡಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಜೆಡಿಎಸ್ ಕಾರ್ಯಕರ್ತರಿಂದ, ನಗರದ ರಾಯಣ್ಣ ಸರ್ಕಲ್ ಬಳಿ ಕಾಲಿ ಸಿಲಿಂಡರ್ ಇಟ್ಟು ಕಟ್ಟಿಗೆ ಒಲೆ ಹತ್ತಿ ಅಡುಗೆ ಮಾಡುವುದರ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಿವುದರ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆ ಮಾಡಿದ ಜೆಡಿಎಸ್ ಕಾರ್ಯಕರ್ತರು, ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದರಿಂದ ಬಡವರು, ಮಧ್ಯಮವರ್ಗದವರು ಸಂಕಟದಲ್ಲಿ ಸಿಲುಕಿದ್ದಾರೆ. ಕೂಡಲೆ ಸರ್ಕಾರ ಅಡುಗೆ ಅನಿಲ ಬೆಲೆಯನ್ನು ಬಡವರ ಕೈಗೆಟುವಂತೆ ಕಡಿಮೆ ಮಾಡಬೇಕು. ಬಡವರ ಪರವಾದ ಈ ಬೇಡಿಕೆಯನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುತ್ತದೆಂದು ಒತ್ತಾಯಿಸಿದರು.