ಹುಬ್ಬಳ್ಳಿ: ಧಾರವಾಡ ಜಿಲ್ಲೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಾಕಷ್ಟು ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಮಂಡ್ಯದಿಂದ ಹುಬ್ಬಳ್ಳಿ ಏರಪೋರ್ಟ್ ಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲ ರೀತಿಯ ಪರಿಶೀಲನೆ ನಡೆಸಲಾಗಿದ್ದು, ಏರಪೋರ್ಟ್ ನಲ್ಲಿ ಟೈಟ್ ಸೆಕ್ಯೂರಿಟಿ ನಿಯೋಜನೆ ಮಾಡಲಾಗಿದೆ.
ಸದ್ಯ ಏರಪೋರ್ಟ್ ಡಿಸಿಪಿ,ಪೊಲೀಸ್ ಇನ್ಸಪೆಕ್ಟರ್,ಸೇರಿ ಸುಮಾರು 200ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳಿದ್ದು, ಭದ್ರತೆ ಪರಿಶೀಲನೆ ನಡೆಸುತ್ತಿದ್ದಾರೆ.