ಕಲಘಟಗಿ: ಇಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಕಾರ್ಯಕ್ರಮ ಮಳೆಯ ಕಾರಣದಿಂದ ರದ್ದಾಗಿದೆ.
ಕಳೆದ ಒಂದು ಗಂಟೆಯಿಂದ ಕಲಘಟಗಿಯಲ್ಲಿ ಬಿಟ್ಟೂಬಿಡದೆ ಮಳೆ ಸುರಿಯುತ್ತಿದೆ. ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿನ ಕಾರ್ಯಕ್ರಮಕ್ಕೆ ಸಾವಿರಾರು ಜನರನ್ನ ಸೇರಿಸುವ ಮೂಲಕ ಮಾಜಿ ಸಚಿವ ಸಂತೋಷ್ ಲಾಡ್ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದರು. ಇದಕ್ಕಾಗಿ ಎಲ್ಲ ರೀತಿಯ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿತ್ತು. ಆದರೆ ದಿಢೀರನೇ ಸುರಿದ ಮಳೆಯ ಕಾರಣದಿಂದ ಕಾರ್ಯಕ್ರಮ ರದ್ದಾಗಿದೆ. ಇದರಿಂದ ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಶೆಯಾಗಿದೆ.