News Kannada
Friday, March 31 2023

ಹುಬ್ಬಳ್ಳಿ-ಧಾರವಾಡ

ಧಾರವಾಡ: ದ್ವಿಚಕ್ರ ವಾಹನ ಹಸ್ತಾಂತರಿಸಿದ ಶಾಸಕ ಅಮೃತ ದೇಸಾಯಿ

Dharwad: MLA Amrit Desai hands over two-wheeler
Photo Credit : By Author

ಧಾರವಾಡ: ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮಗಳ ಸಹಯೋಗದಲ್ಲಿ 2022-23ನೇ ಸಾಲಿನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ದ್ವಿಚಕ್ರ ವಾಹನ ವಿತರಣೆ ಯೋಜನೆಯಡಿ ಫಲಾನುಭವಿಗಳಿಗೆ ಶಾಸಕ ಅಮೃತ ದೇಸಾಯಿ ಅವರು ಕಲಾಭವನ ಆವರಣದಲ್ಲಿ ದ್ವಿಚಕ್ರ ವಾಹನಗಳನ್ನು ವಿತರಣೆ ಮಾಡಿದರು.

ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ವಿತರಣೆ: ಕಲಾಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಶಾಸಕ ಅಮೃತ ದೇಸಾಯಿ ಅವರು ಶಹರ ವಲಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಓದಿ 2021-22 ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೊದಲ ಮೂರು ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಉಚಿತವಾಗಿ ಲ್ಯಾಪ್‍ಟಾಪ್ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಾಲೆಗಳ ಮುಖ್ಯಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ, ಎಸ್‍ಎಸ್‍ಎಲ್‍ಸಿ ನೋಡಲ್ ಅಧಿಕಾರಿ ಕೆ.ಎಫ್. ಜಾವೂರ, ವಿದ್ಯಾರ್ಥಿಗಳ ಪಾಲಕರು ಹಾಜರಿದ್ದರು. ಶಾಸಕರು ವಿದ್ಯಾರ್ಥಿಗಳಿಗೆ ಸದರಿ ಯೋಜನೆ ಸದುಪಯೋಗ ಪಡಿಸಿಕೊಂಡು ಉನ್ನತ ಅಧ್ಯಯನ ಕೈಗೊಂಡು ಸಾಧನೆ ಮಾಡುವಂತೆ ಶುಭ ಹಾರೈಸಿ ಅಭಿನಂದಿಸಿದರು.

See also  ನಾಗಮಂಗಲ: ಜನಪರ ಜನತಾ ಸರ್ಕಾರಕ್ಕೆ ಒಗ್ಗಟ್ಟಾಗಿ ಬೆಂಬಲಿಸಿ-ನಿಖಿಲ್ ಕುಮಾರಸ್ವಾಮಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು