ಧಾರವಾಡ: ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಮತ್ತು ಶಾಸಕ ಅಮೃತ ದೇಸಾಯಿ ಅವರ ಅನುದಾನದಲ್ಲಿ ನಿರ್ಮಾಣಗೊಂಡ ಮೂರುಸಾವಿರ ವಿರಕ್ತಮಠದ ನೂತನ ಶಿಲಾಮಠವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಶಾಸಕ ಅಮೃತ ದೇಸಾಯಿ ಅವರು ಲೋಕಾರ್ಪಣೆಗೊಳಿಸಿದರು.
ಶಿಲಾಮಠವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಠ, ಮಂದಿರಗಳಿಗೆ ಅನುದಾನ ನೀಡುವ ಪದ್ಧತಿಯನ್ನು ಬಿಜೆಪಿ ಪಕ್ಷವೇ ಹುಟ್ಟು ಹಾಕಿ, ಅನುದಾನ ನೀಡುತ್ತ ಬಂದಿದೆ. ಕಾಶಿ ಈಗ ಸಂಪೂರ್ಣ ಬದಲಾಗಿದೆ. ಕಾಶಿಗೆ ಹೋಗಲು ನಾವು ಸಾಕಷ್ಟು ವ್ಯವಸ್ಥೆಯನ್ನು ಕೂಡ ಮಾಡುತ್ತಿದ್ದೇವೆ. ಮಠ, ಮಂದಿರಗಳ ಬದಲಾವಣೆಯಾಗಿದ್ದು, ಬಿಜೆಪಿ ಕಾಲದಲ್ಲಿ ಎಂದರು.
ಇದೇ ಸಂದರ್ಭದಲ್ಲಿ ಗ್ರಾಮದ ಸುಮಂಗಲೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಕೂಡ ನಡೆಯಿತು. ಶಾಸಕ ಅಮೃತ ದೇಸಾಯಿ, ಮುನವಳ್ಳಿ ಸೋಮಶೇಖರ ಮಠದ ಮುರುಫೇಂದ್ರ ಸ್ವಾಮೀಜಿ, ಅಮ್ಮಿನಭಾವಿ ಪಂಚಗೃಹ ಹಿರೇಮಠದ ಅಭಿನವ ಶಾಂತಲಿಂಗ ಸ್ವಾಮೀಜಿ, ಉಪ್ಪಿನ ಬೆಟಗೇರಿ ಮೂರು ಸಾವಿರ ವಿರಕ್ತಮಠದ ಕುಮಾರ ವಿರುಪಾಕ್ಷ ಸ್ವಾಮೀಜಿ ಸೇರಿದಂತೆ ಅನೇಕರು ಇದ್ದರು.