ಹುಬ್ಬಳ್ಳಿ: ಶ್ರೀ ಕ್ಷೇತ್ರ ಶ್ರವಣ ಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರ ಅಗಲಿಕೆಯು ಅತ್ಯಂತ ದುಃಖದಾಯಕ ಸಂಗತಿ ಎಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿಯವರು ತಮ್ಮ ಸಂತಾಪ ಸೂಚಿಸಿದ್ದಾರೆ.
ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನ ಸಂಸ್ಥೆಯನ್ನು ಸ್ಥಾಪಿಸಿ ಅದರ ಮೂಲಕ ಪಾಕೃತ ಭಾಷೆಗೆ ಮರುಜೀವ ತುಂಬಿದ್ದರು.ವಿದ್ವಾಂಸರಿಗೆ ಪ್ರಾಕೃತ ಜ್ಞಾನಭಾರತಿ ಪ್ರಶಸ್ತಿ, ಜೈನ ಸಾಹಿತ್ಯ ಸಂಸ್ಕೃತಿಗಳಿಗೆ ಶ್ರೀ ಗೊಮ್ಮಟೇಶ್ವರ ವಿದ್ಯಾಪೀಠ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿನಿಧಿ, ಕನ್ನಡ ಜೈನ ಸಾಹಿತ್ಯ ಸೇವೆಗೆ ಚಾವುಂಡರಾಯ ಪ್ರಶಸ್ತಿಗಳನ್ನು ಸ್ಥಾಪಿಸಿ ವಿಶೇಷ ಸಾಧಕರಿಗೆ ಅವುಗಳನ್ನು ನೀಡಿ ಗೌರವಿಸುತ್ತಾ ಬಂದಿದ್ದರು ಎಂದು ಸ್ಮರಿಸಿರುವ ಜೋಶಿ, ಅವರ ದಿವ್ಯಾತ್ಮಕ್ಕೆ ಸದ್ಗತಿ ದೊರೆಯಲಿ ಎಂದೂ ಪ್ರಾರ್ಥಿಸಿದ್ದಾರೆ.