ಹುಬ್ಬಳ್ಳಿ: ನಾಳೆ ಕರ್ನಾಟಕದ ಇತಿಹಾಸದಲ್ಲಿ ಒಂದು ಸುವರ್ಣಾಕ್ಷರದಲ್ಲಿ ಬರೆದಿಡೋ ದಿನ, ಒಳಮೀಸಲಾತಿಯನ್ನು ಬಸವರಾಜ ಬೊಮ್ಮಾಯಿ ಅನುಷ್ಠಾನಕ್ಕೆ ತಂದಿದ್ದಾರೆ. ಇದು ಐತಿಹಾಸಿಕ ನಿರ್ಧಾರ. ನಾಳೆ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಸಿಸಿ ಪಾಟೀಲ್ ಹೇಳಿದರು.
ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದಲಿತ ಸಮುದಾಯವನ್ನು ವೋಟ್ ಬ್ಯಾಂಕ್ ಮಾಡಿಕೊಂಡಿತ್ತು. ಐದು ವರ್ಷಕ್ಕೊಮ್ಮೆ ಅವರನ್ನ ಬಾವಿಯಿಂದ ಹೊರಗೆ ತಗೆದು ವೋಟ್ ಹಾಕಿಸಿಕೊಂಡು ಮತ್ತೆ ಬಾವಿಯೊಳಗೆ ತಳ್ಳುತ್ತಿದ್ದಾರೆ.
ಪರಿಶಿಷ್ಟ ಜಾತಿ ಸಮಾಜಕ್ಕೆ ನ್ಯಾಯ ಒದಗಿಸುವ ಕೆಲಸ ಆಗಿದೆ. ಹೀಗಾಗಿ ಪರಿಶಿಷ್ಟ ಜನಾಂಗದಿಂದ ಸಿಎಂ ಬಸವರಾಜ ಬೊಮ್ಮಾಯಿಗೆ ಅಭಿನಂದನಾ ಸಮಾವೇಶ ಆಯೋಜನೆ ಮಾಡಿದೆ. ಸಮಾವೇಶದಲ್ಲಿ ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದರು.