ಹುಬ್ಬಳ್ಳಿ: ಶೋಷಿತ ವರ್ಗಗಳಿಗೆ ಅನ್ಯಾಯ ಮಾಡಿರುವ ಪಕ್ಷ ಅಂದರೆ ಅದು ಕಾಂಗ್ರೆಸ್ ಪಕ್ಷ. ಬಾಬಾಸಾಹೇಬ ಅಂಬೇಡ್ಕರ್ ಅವರಿಗೂ ಕೂಡ ಸಾಕಷ್ಟು ಅಡೆತಡೆಗಳನ್ನು ಉಂಟು ಮಾಡಿರುವುದು ಕಾಂಗ್ರೆಸ್ ಪಕ್ಷ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸುಡುವ ಮನೆ ಅಲ್ಲಿ ಯಾರು ಕೂಡ ಹೋಗಬಾರದು ಎಂದು ಬಾಬಾಸಾಹೇಬ ಅಂಬೇಡ್ಕರ್ ಅವರು ಹೇಳಿದ್ದಾರೆ. ಹಸಿರುಕ್ರಾಂತಿ ಹರಿಕಾರ ಜಗಜೀವನರಾಮ್ ಅವರಿಗೆ ಅನ್ಯಾಯ ಮಾಡಿದವರು ಕಾಂಗ್ರೆಸ್ ಪಕ್ಷ. ಮುನಿಯಪ್ಪನವರನ್ನು ಮುಳಿಗಿಸಿದ್ದು, ಕಾಂಗ್ರೆಸ್ ಪಕ್ಷ ಎಂದು ಅವರು ಆರಂಭದಲ್ಲಿಯೇ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಜೆಪಿಯವರು ಬಂದರೇ ಮೀಸಲಾತಿ ತೆಗೆದು ಹಾಕುತ್ತಾರೆ ಎಂಬುವಂತ ಮಾತನ್ನು ಕಾಂಗ್ರೆಸ್ ನಾಯಕರು ಹೇಳಿಕೊಂಡು ಓಡಾಡುತ್ತಿದ್ದರು. ಆದರೆ ಈಗ ಬೊಮ್ಮಾಯಿ ಸರ್ಕಾರ ಕೀರಿಟ ಇಟ್ಟಂತೆಯೇ ಕಾರ್ಯವನ್ನು ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಸುಡುವ ಮನೆಯಾಗಿದೆ. ಶೋಷಿತರನ್ನು ಸುಟ್ಟು ರೊಟ್ಟಿ ಮಾಡಿಕೊಂಡು ತಿನ್ನುವವರು ಕಾಂಗ್ರೆಸ್ ಪಕ್ಷದವರು ಎಂದು ಅವರು ಹೇಳಿದರು.