ಧಾರವಾಡ: 2023ರ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು ತನ್ನ ಮೂರನೇ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ದೀಪಕ ಚಿಂಚೋರೆ ಅವರಿಗೆ ಕಾಂಗ್ರೆಸ್ ಟಿಕೆಟ್ನೀಡಲಾಗಿದೆ.
ಹಾಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರ ವಿರುದ್ಧ ದೀಪಕ ಚಿಂಚೋರೆ ಕಣಕ್ಕಿಳಿದಿದ್ದಾರೆ.ಕಾಂಗ್ರೆಸ್ ಟಿಕೆಟ್‌ಗಾಗಿ ಆಕಾಂಕ್ಷಿಗಳ ದಂಡೇ ಹುಟ್ಟಿಕೊಂಡಿತ್ತು. ಕೊನೆಗೆ ದೀಪಕ ಚಿಂಚೋರೆ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು, ಏಪ್ರಿಲ್ 20 ರಂದು ದೀಪಕ ಚಿಂಚೋರೆ ಅವರು ತಮ್ಮ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.