ಧಾರವಾಡ: ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಇದ್ದರೂ ಬಿಜೆಪಿ ಅಭ್ಯರ್ಥಿ ಎಂ.ಆರ್.ಪಾಟೀಲ ಭರ್ಜರಿ ಜಯಭೇರಿ ಬಾರಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಹಾಗೂ ಪಕ್ಷೇತರ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ ಮಧ್ಯೆ ತೀವ್ರ ಪೈಪೋಟಿ ಇತ್ತು. ಕೊನೆಗೆ ಬಿಜೆಪಿ ಅಭ್ಯರ್ಥಿ ಎಂ.ಆರ್.ಪಾಟೀಲ ಗೆಲುವು ದಾಖಲಿಸಿದ್ದಾರೆ.