News Kannada
Sunday, March 03 2024
ಹುಬ್ಬಳ್ಳಿ-ಧಾರವಾಡ

ಕರ್ನಾಟಕ ಗೂಂಡಾ ರಾಜ್ಯ ಮಾಡಲು ಕಾಂಗ್ರೆಸ್ ಪಣತೊಟ್ಟಿದೆ – ಜೋಶಿ ಆಕ್ರೋಶ

ಶಿವಮೊಗ್ಗದಲ್ಲಿ ನಡೆದ ಕೋಮುಗಲಭೆಯಲ್ಲಿ ಹಿಂದೂಗಳ ಮನೆಗಳ ಮೇಲೆ ದಾಳಿ ಹಾಗೂ ಹಿಂದೂ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದರೂ ಸಹ “ಕರ್ನಾಟಕದಲ್ಲಿ ಇಂತಹ ಘಟನೆಗಳು ಹೊಸತೇನಲ್ಲ” ಎಂದಿರುವ ಗೃಹ ಸಚಿವ ಪರಮೇಶ್ವರ ಅವರು ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಗುತ್ತಿಗೆ ಪಡೆದಿದ್ದೀರಾ? ಎಂದು ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿಯವರು ಕಿಡಿ ಕಾರಿದ್ದಾರೆ.
Photo Credit : News Kannada

ಹುಬ್ಬಳ್ಳಿ: ಶಿವಮೊಗ್ಗದಲ್ಲಿ ನಡೆದ ಕೋಮುಗಲಭೆಯಲ್ಲಿ ಹಿಂದೂಗಳ ಮನೆಗಳ ಮೇಲೆ ದಾಳಿ ಹಾಗೂ ಹಿಂದೂ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದರೂ ಸಹ “ಕರ್ನಾಟಕದಲ್ಲಿ ಇಂತಹ ಘಟನೆಗಳು ಹೊಸತೇನಲ್ಲ” ಎಂದಿರುವ ಗೃಹ ಸಚಿವ ಪರಮೇಶ್ವರ ಅವರು ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಗುತ್ತಿಗೆ ಪಡೆದಿದ್ದೀರಾ? ಎಂದು ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿಯವರು ಕಿಡಿ ಕಾರಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಘಟನೆ ಬಗ್ಗೆ ಹೇಳಿಕೆ ನೀಡಿರುವ ಅವರು ಶಿವಮೊಗ್ಗದಲ್ಲಿ ಗಲಭೆ ನಡೆಯಲು ನೇರವಾಗಿ ರಾಜ್ಯ ಕಾಂಗ್ರೆಸ್ ಸರಕಾರವೇ ಬೆಂಬಲವಾಗಿ ನಿಂತಿದೆ. ಇದರೊಂದಿಗೆ ಕರ್ನಾಟಕವನ್ನು ಗೂಂಡಾರಾಜ್ಯ ಮಾಡಲು ಈ ಸರಕಾರ ಪಣತೊಟ್ಟಂತಿದೆ. ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸರಕಾರ ಬಂದಾಗಿನಿಂದ ಒಂದೆಡೆ ಹಿಂದೂಗಳ ಹಬ್ಬಕ್ಕೆ ನಿರ್ಬಂಧ ಮತ್ತೊಂದೆಡೆ ಮತಾಂಧ ಶಕ್ತಿಗಳ ಅಟ್ಟಹಾಸಕ್ಕೆ ಬೆಂಬಲ ನೀಡುತ್ತಿದೆ. ಮತಾಂಧ ಶಕ್ತಿಗಳನ್ನು ಪೋಷಿಸಿ ಬೆಳೆಸಲೆಂದೇ ಈ ಸರಕಾರ ಅಧಿಕಾರಕ್ಕೆ ಬಂದಿದೆ. ಇನ್ನು ಈ ಪ್ರಕರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಾಗೂ ಗೃಹ ಸಚಿವ ಪರಮೇಶ್ವರ ಅವರ ಪ್ರತಿಕ್ರಿಯೆ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದರು. ಅಂದು ನಾಡ ವಿರೋಧಿ ಟಿಪ್ಪುವಿನ ವಿಜೃಂಭಣೆ ಮಾಡಿದಿರಿ, ಇಂದು ರಾಷ್ಟ್ರ ವಿರೋಧಿ ಔರಂಗಜೇಬನ ವಿಜೃಂಭಣೆಯಾಗುತ್ತಿದೆ. ನಮ್ಮ ಕರ್ನಾಟಕ ಎತ್ತ ಸಾಗುತ್ತಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು