ಧಾರವಾಡ: ನಗರದಲ್ಲಿ ವರುಣನ ಆರ್ಭಟ ಜೋರಾಗಿದೆ. ಬಿಸಿಲಿನ ದಾಹಕ್ಕೆ ಜನರು ಸುಸ್ತಾಗಿದ್ದು ತಂಪೇರಿಚಿದೆ. ಭಾರಿ ಪ್ರಮಾಣದಲ್ಲಿ ಗುಡುಗು ಸಿಡಿಲಿನ ಹೊಡತಕ್ಕೆ ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ತೆಂಗಿನ ಮರ ಹೊತ್ತಿ ಉರಿದ ಘಟನೆ ಅಣ್ಣಿಗೇರಿ ಪಟ್ಟಣದಲ್ಲಿ ನಡೆದಿದೆ.
ಅಣ್ಣಿಗೇರಿ ಪಟ್ಟಣದ ರಾಜು ಹುಬ್ಬಳ್ಳಿ ಎನ್ನುವವರ ಮನೆಯ ಹಿತ್ತಲಿನಲ್ಲಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಸಿಡಿಲಿನ ಹೊಡೆತಕ್ಕೆ ತೆಂಗಿನ ಮರ ಹೊತ್ತಿ ಉರಿದಿದೆ. ಇದನ್ನು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.