ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಹುಬ್ಬಳ್ಳಿಯ ಮೂರುಸಾವಿರ ಮಠದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.
ಈಗಾಗಲೇ ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದಲ್ಲಿ ಸತತ ಮೂರು ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರಸಾದ್ ಅಬ್ಬಯ್ಯಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ಗೆ ಒತ್ತಾಯಿಸಿದರು. ಈಗಾಗಲೇ ಧಾರವಾಡ ಜಿಲ್ಲೆಯಲ್ಲಿ ಬಹುತೇಕ ಕಡೆಯಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾರ್ಯಕರ್ತರು ಒತ್ತಾಯಿಸಿದರು.