ಹುಬ್ಬಳ್ಳಿ : ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರಾರ್ಥ ಅಂಗವಾಗಿ ರಾಷ್ಟ್ರೀಯ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ವನತಿ ಶ್ರೀನಿವಾಸನ್ ಅವರ ನೇತೃತ್ವದಲ್ಲಿ ದಾಜೀಬಾನಪೇಟೆಯ ತುಳಜಾಭವಾನಿ ಸರ್ಕಲ್ ನಲ್ಲಿ ನಡೆದ ಮಹಿಳಾ ಮೋರ್ಚಾ ಸಮಾವೇಶದಲ್ಲಿ ಪೂರ್ವ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಡಾ. ಕ್ರಾಂತಿ ಕಿರಣ ಭಾಗವಹಿಸಿ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ನೇತೃತ್ವದ ಡಬಲ್ ಇಂಜಿನ್ ಸರ್ಕಾರವು ಮಹಿಳೆಯರ ಸ್ವಾವಲಂಬನೆಗೆ, ಮಹಿಳಾ ಸ್ವಸಹಾಯ ಗುಂಪುಗಳಿಗೆ ಹಾಗೂ ಮಹಿಳೆಯರ ಆರ್ಥಿಕ ಪ್ರಗತಿಗೆ ನೀಡಿದ ಕೊಡುಗೆಗಳ ಬಗ್ಗೆ ಮಾಹಿತಿ ನೀಡಿ ಬಿಜೆಪಿ ಪರ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ವ ಮಹಿಳಾ ಮೋರ್ಚಾದ ಸರ್ವ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು, ಪಾಲಿಕೆ ಸದಸ್ಯರು, ಪಕದ ಪ್ರಮುಖರು, ಕಾರ್ಯಕರ್ತರು,ಇನ್ನಿತರರು ಉಪಸ್ಥಿತರಿದ್ದರು.