ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಗಣೇಶೋತ್ಸವ ಸಂಭ್ರಮ ಅಂದರೆ ನಿಜಕ್ಕೂ ಅದೊಂದು ಅದ್ಬುತ ಕ್ಷಣಗಳಿಗೆ ಸಾಕ್ಷಿಯಾಗುವ ಹಬ್ಬ. ಈ ನಿಟ್ಟಿನಲ್ಲಿ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪನೆಗೊಂಡಿರುವ ವಿಘ್ನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸುವ ಮಹಾ ಮಂಗಳಾರತಿ ಮಾಡಲಾಯಿತು.
ಹೌದು..ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳದಿಂದ ಪ್ರತಿಷ್ಠಾಪನೆ ಮಾಡಿರುವ ಗಣಪತಿಗೆ ಸಾಂಪ್ರದಾಯಿಕವಾಗಿ ಮಹಾ ಮಂಗಳಾರತಿ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು. ಬೆಳಿಗ್ಗೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ದರ್ಶನ ಪಡೆದಿದ್ದು, ಸಂಜೆಯ ವೇಳೆಯಲ್ಲಿ ಭಕ್ತಗಣದ ನಡುವೆ ವಿಶೇಷ ಪೂಜೆ ಹಾಗೂ ಮಹಾ ಮಂಗಳಾರತಿ ಮಾಡಲಾಯಿತು.
ಇನ್ನೂ ಮಂಗಳಾರತಿಯಲ್ಲಿ ಭಕ್ತಸಾಗರವೇ ಪಾಲ್ಗೊಂಡು ಭಜನೆಯ ಮೂಲಕ ಗಜಾನನನಿಗೆ ಭಕ್ತಿ ಸಮರ್ಪಣೆ ಮಾಡಿದರು.