News Kannada
Friday, February 23 2024
ಹುಬ್ಬಳ್ಳಿ-ಧಾರವಾಡ

ವಿನಯ್ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್​

ಧಾರವಾಡ ಜಿಲ್ಲೆ ಪ್ರವೇಶ ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಬಳಿಕ ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ.
Photo Credit : News Kannada

ಧಾರವಾಡ: ಧಾರವಾಡ ಜಿಲ್ಲೆ ಪ್ರವೇಶ ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಬಳಿಕ ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ.

ಜನವರಿ 17 ಕ್ಕೆ ವಿಚಾರಣೆ ಮುಂದೂಡಲಾಗಿದೆ. ಜನಪ್ರತಿನಿಧಿಯಾಗಿರುವ ಹಿನ್ನಲೆ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿದ್ದರು. ಇದಕ್ಕೂ ಮೊದಲು ಚುನಾವಣೆ ಸ್ಪರ್ಧಿಸಿದ್ದಾಗ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿತ್ತು.

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಾಕ್ಷಿ ನಾಶಗೊಳಿಸುವ ಸಾಧ್ಯತೆ ಹಿನ್ನೆಲೆ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶ ನಿರ್ಬಂಧಿಸಲಾಗಿದೆ. ಹಲವು ಬಾರಿ ಪ್ರವೇಶ ಕೋರಿ ಕೋರ್ಟ್​ಗೆ ಮನವಿ ಸಲ್ಲಿಸಿದರೂ ಕುಲಕರ್ಣಿಗೆ ಅನುಮತಿ ಸಿಗುತ್ತಿಲ್ಲ. ಇತ್ತೀಚೆಗೆ ನಡೆದ ವಿಚಾರಣೆಯಲ್ಲಿ ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು.

ಈಗಾಗಲೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಗುರುತರ ಆರೋಪ ಶಾಸಕ ವಿನಯ್ ಕುಲಕರ್ಣಿ ಮೇಲಿದೆ.

ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶಗೌಡ ಗೌಡರ್ ಅವರನ್ನು ಜೂನ್ 2016 ರಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 2020 ರಲ್ಲಿ ವಿನಯ್ ಕಲಕರ್ಣಿ ಅವರನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನು ನೀಡಲಾಘಿತ್ತು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು