ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ವೀಕ್ಷಕರಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೇಮಕ ವಿಚಾರ ಬಗ್ಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.
ನನ್ನನ್ನು ಬೀದರ್ ಜಿಲ್ಲೆಯ ಉಸ್ತುವಾರಿಯನ್ನಾಗಿ ನೇಮಕ ಮಾಡಿದ್ದಾರೆ. ಧಾರವಾಡ ಜಿಲ್ಲೆಗೆ ಹೆಬ್ಬಾಳಕರ್ ಆಯ್ಕೆ ಆಗಿದ್ದಾರೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಲಿಂಗಾಯತ ಲಿಡರ್ ಎಂದು ಹೇಳುವ ಅವಶ್ಯಕತೆ ಇಲ್ಲಾ ಎಂದು ಹೇಳಿದರು.
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಲಿಂಗಾಯತ ಮತಗಳು ಹೆಚ್ಚಳವಾಗಿವೆ. ಈ ಹಿನ್ನಲೆಯಲ್ಲಿ ಅವರನ್ನ ಆಯ್ಕೆ ಮಾಡಿರಬಹುದು ಹಾಗೆ ಅವರು ಸ್ಥಳೀಯ ಕಾಂಗ್ರೆಸ್ ಮುಖಂಡರುಗಳ ಜೊತೆ ಸಭೆ ಮಾಡಲಿದ್ದಾರೆ ಸಭೆ ಬಳಿಕ ಹೆಸರು ಪ್ರಸ್ತಾಪ ಮಾಡುತ್ತಾರೆ.
ಶಿವಲೀಲಾ ಕುಲಕರ್ಣಿ, ವಿಜಯ ಕುಲಕರ್ಣಿ, ವಿನೋದ ಅಸೋಟಿ, ಜಗದೀಶ್ ಶೆಟ್ಡರ್ ಹೆಸರು ಪ್ರಸ್ತಾಪ ವಿಚಾರಕ್ಕೆ ಸದ್ಯ ಹೆಬ್ಬಾಳ್ಕರ್ ಜಿಲ್ಲೆಗೆ ಬಂದು ಸಭೆ ಮಾಡುತ್ತಾರೆ ಸಭೆ ಬಳಿಕ ಒಂದು ಹೆಸರು ಹೈಕಮಾಂಡ್ ಗೆ ಕೊಡುತ್ತಾರೆ ಎಂದು ತಿಳಿಸಿದರು.