ಧಾರವಾಡ: ವೇಗವಾಗಿ ಬಂದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ಸೋಮಾಪುರ ಗ್ರಾಮದ ಬಳಿ ಸಂಭವಿಸಿದೆ. ಅತೀ ವೇಗವಾಗಿ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದರಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಲ್ಲದೇ ಕಾರಿನ ಅವಶೇಷಗಳು ಎಲ್ಲೆಂದರಲ್ಲಿ ಬಿದ್ದಿವೆ.
ಹುಬ್ಬಳ್ಳಿ ಕೇಶ್ವಾಪುರದ ಇಮ್ಮಿಯಾಜ್ ಎಂಬ ವ್ಯಕ್ತಿಯೇ ಈ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ನವಲಗುಂದದಿಂದ ಧಾರವಾಡಕ್ಕೆ ಹೋಗುತ್ತಿದ್ದ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ನಡೆದಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.