ಧಾರವಾಡ: ಈ ಹಿಂದೆ ಸಿದ್ದರಾಮಯ್ಯ ಸಿಎಂ ಇದ್ದ ಸಂದರ್ಭದಲ್ಲಿ ಇಂದಿರಾ ಕ್ಯಾಂಟೀನ್ ತೆರೆದು ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಆಹಾರ ವಿತರಿಸಲಾಗುತ್ತಿತ್ತು. ಬಿಜೆಪಿ ಸರ್ಕಾರ ಬಂದ ಮೇಲೆ ಈ ಯೋಜನೆಗೆ ಬ್ರೇಕ್ ನೀಡಲಾಗಿತ್ತು. ಇದೀಗ ಮತ್ತೆ ಸಿದ್ದರಾಮಯ್ಯನವರು ಸಿಎಂ ಆಗಿರುವುದರಿಂದ ಇಂದಿರಾ ಕ್ಯಾಂಟೀನ್ ಮತ್ತೆ ಕಾರ್ಯಾರಂಭ ಮಾಡಲು ಸಿದ್ಧವಾಗಿವೆ.
ಅದೇ ಖುಷಿಯಲ್ಲಿ ಧಾರವಾಡದ ಪಾಲಿಕೆ ಸದಸ್ಯ ಡಾ.ಮಯೂರ್ ಮೋರೆ ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಇಂದಿರಾ ಕ್ಯಾಂಟೀನ್ನಲ್ಲಿ ಸಾರ್ವಜನಿಕರಿಗೆ ಹೋಳಿಗೆ ಊಟ ಬಡಿಸುವ ಮೂಲಕ ಖುಷಿ ಹಂಚಿಕೊಂಡಿದ್ದಾರೆ.
ಸಿದ್ದರಾಮಯ್ಯ ಸಿಎಂ ಆಗಿರುವುದರಿಂದ ಇಂದಿರಾ ಕ್ಯಾಂಟೀನ್ ಮತ್ತೆ ಕಾರ್ಯಾರಂಭ ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ ಹೀಗಾಗಿ ಇದೇ ಖುಷಿಯಲ್ಲಿ ಹುಬ್ಬಳ್ಳಿ, ಧಾರವಾಡ, ದಕ್ಷಿಣ ಕನ್ನಡ, ಬಾಗಲಕೋಟೆ ಸೇರಿದಂತೆ ಒಟ್ಟು 17 ಇಂದಿರಾ ಕ್ಯಾಂಟೀನ್ಗಳಲ್ಲಿ 9 ಸಾವಿರ ಹೋಳಿಗೆಗಳನ್ನು ವಿತರಣೆ ಮಾಡಲಾಗಿದೆ. ಧಾರವಾಡದ ಮಿನಿ ವಿಧಾನಸೌಧದ ಎದುರಿಗೆ ಇರುವ ಇಂದಿರಾ ಕ್ಯಾಂಟೀನ್ನಲ್ಲಿ ಹೋಳಿಗೆ ಊಟ ಹಾಕಲಾಗಿದ್ದು, ಸಾರ್ವಜನಿಕರು ಖುಷಿಯಿಂದಲೇ ಹೋಳಿಗೆ ಊಟ ಸವಿದಿದ್ದಾರೆ.