ಗದಗ : ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಗದಗ ತಾಲೂಕಿನ ಹರ್ಲಾಪುರ ಕ್ರಾಸ್ ಬಳಿ ಈ ಅಪಘಾತ ಉಂಟಾಗಿದೆ.
ಕಾರು-ಬೈಕ್ ನಡುವೆ ಸಂಭವಿಸಿದ ಅಪಘಾತದ ತೀವ್ರತೆಗೆ ಯಲ್ಲಪ್ಪಗೌಡ ವೆಂಕನಗೌಡ (50) ಸ್ಥಳದಲ್ಲೇ ಸಾವಿಗೀಡಾದರೆ, ಲೋಕೇಶ್ ಗುಡಕೇರಿ ಎಂಬಾತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಸಾವಿಗೀಡಾದ ಯಲ್ಲಪ್ಲಗೌಡ ಹಾಗೂ ಲೋಕೇಶ್ ಗದಗ ತಾಲೂಕಿನ ಶ್ಯಾಗೋಟಿ ಗ್ರಾಮದ ನಿವಾಸಿಗಳು. ಇಬ್ಬರೂ ಒಂದೇ ಬೈಕ್ನಲ್ಲಿ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತವಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.