News Kannada
Monday, December 05 2022

ಹಾವೇರಿ

ಹಾವೇರಿಗೆ ಭೇಟಿ ನೀಡಿದ ಕೇಂದ್ರ ಅತಿವೃಷ್ಟಿ ಅಧ್ಯಯನ ತಂಡ

Photo Credit :
ಹಾವೇರಿ: ಭಾನುವಾರ ಜಿಲ್ಲೆಗೆ ಕೇಂದ್ರ ಸರ್ಕಾರದ ಅತಿವೃಷ್ಟಿ ಅಧ್ಯಯನ ತಂಡ ಜಿಲ್ಲೆಗೆ ಭೇಟಿ ನೀಡದೆ  ಶಿಗ್ಗಾಂವ, ಹಾನಗಲ್, ಹಾವೇರಿ,ಸವಣೂರ, ರಾಣೇಬೆನ್ನೂರ ಹಾಗೂ ಹಿರೇಕೆರೂರು ತಾಲೂಕಿನ ಹಾನಿಪೀಡಿತ ಆಯ್ದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಭಾರತ ಸರ್ಕಾರದ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಮಂತ್ರಾಲಯದ ಮುಖ್ಯ ಅಭಿಯಂತರ  ಎಸ್.ವಿ. ಜಯಕುಮಾರ, ಗ್ರಾಮೀಣ ಅಭಿವೃದ್ಧಿ ಮಂತ್ರಾಲಯದ ಅಂಡರ್ ಸೇಕ್ರೆಟರಿ  ಕೈಲಾಶ್ ಸಂಖ್ಲಾ ಅವರನ್ನು ಒಳಗೊಂಡ ಅಂತರ ಸಚಿವಾಲಯದ ಅಧ್ಯಯನ ತಂಡ ಶಿಗ್ಗಾಂವ ತಹಶೀಲ್ದಾರ ಕಚೇರಿಗೆ ಆಗಮಿಸಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಯ ಕುರಿತು ಮಾಹಿತಿ ಪಡೆದುಕೊಂಡರು. ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ  ಹಾನಿಯ ಮಾಹಿತಿ ಕುರಿತಂತೆ ಕೇಂದ್ರ ತಂಡಕ್ಕೆ ವಿವರಿಸಿದರು.
ಸಭೆಯಲ್ಲಿ ಜಿ ಪಂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ  ಮಹಮ್ಮದ್ ರೋಷನ್  ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಸವಣೂರ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮವರ, ಕೃಷಿ ಜಂಟಿ ನಿರ್ದೇಶಕ ಬಿ. ಮಂಜುನಾಥ್, ತೋಟಗಾರಿಕೆ ಉಪನಿರ್ದೇಶಕ ಪ್ರದೀಪ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಸತೀಶ್ ಜಾಗೀರದಾರ್, ಜಿಲ್ಲಾ ಪಂಚಾಯತ್ ಇಂಜನೀಯರಿಂಗ್ ವಿಭಾಗದ ಚನ್ನವೀರಗೌಡ್ರ ಬಸವರಾಜ ಉಪಸ್ಥಿತರಿದ್ದರು
See also  ಪೂರ್ಣ ಪ್ರಮಾಣ ಶಾಲೆ ಆರಂಭ ಕುರಿತು ಶೀಘ್ರ ನಿರ್ಧಾರ: ಸಚಿವ ಬಿ.ಸಿ.ನಾಗೇಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು