News Kannada
Saturday, June 03 2023
ಹಾವೇರಿ

ಎಂಎಲ್‌ಸಿ ಆರ್​.ಶಂಕರ್ ಮನೆ ಮೇಲೆ ದಾಳಿ: 8 ಕೋಟಿ ರೂ. ಮೌಲ್ಯದ ಸೀರೆ, ತಟ್ಟೆ-ಲೋಟಾ, ಬ್ಯಾಗ್‌ ಪತ್ತೆ

Bjp MLC R Shankar's house raided: Rs 8 crore seized Saree, plate-lota, bag found
Photo Credit : Twitter

ಹಾವೇರಿ : ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್​.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಬೀರಲಿಂಗೇಶ್ವರ ನಗರದಲ್ಲಿರುವ ಶಂಕರ್​ ಮನೆ ಮೇಲೆ ನಿನ್ನೆ ತಡರಾತ್ರಿ ದಾಳಿಯಾಗಿದ್ದು, ಈ ವೇಳೆ ಆರ್.ಶಂಕರ್ ಗೃಹಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಹಂಚಲು ತಂದಿದ್ದ ಹಲವು ವಸ್ತುಗಳು ಪತ್ತೆಯಾಗಿವೆ.

ಆರ್.ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ, ಲೋಟಾ ಹಾಗೂ ಎಲ್.ಕೆ.ಜಿಯಿಂದ ಪದವಿ ಕಾಲೇಜು ಮಕ್ಕಳ ತನಕ ಹಂಚಲು ತಂದಿದ್ದ ಸ್ಕೂಲ್ ಬ್ಯಾಗ್ ಸಿಕ್ಕಿದೆ.

ಸುಮಾರು 8 ಕೊಟಿ ರೂಪಾಯಿ ವೆಚ್ಚದ ವಸ್ತುಗಳು ಪತ್ತೆಯಾಗಿವೆ ಎಂದು ಅಂದಾಜಿಸಲಾಗಿದ್ದು, ಈ ಎಲ್ಲ ವಸ್ತುಗಳ GST ಬಿಲ್ ಕೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಆರ್ ಶಂಕರ್, ಬಿಲ್ ಕೊಡಲು ಅವಕಾಶ ಕೇಳಿದ್ದಾರೆ. ಒಂದು ವೇಳೆ ಸರಿಯಾದ ಜಿಎಸ್‌ಟಿ ಬಿಲ್ ಇಲ್ಲದಿದ್ರೆ ದಂಡ ವಿಧಿಸುವ ಸಾಧ್ಯತೆ ಇದೆ.

See also  ಹೊಸದಿಲ್ಲಿ: ಕೇಜ್ರಿವಾಲ್, ಸಿಸೋಡಿಯಾ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಲೆಫ್ಟಿನೆಂಟ್ ಗವರ್ನರ್ ಗೆ ಪತ್ರ ಬರೆದ ಬಿಜೆಪಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು