ವಿಜಯಪುರ: ನಗರದ ಸೊಲ್ಲಾಪುರ ರಿಂಗ್ ರೋಡ್ ಬಳಿಯ ಬಳಮಕರ್ ಮಂಗಲ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯಕಾರಣಿ ಸಭೆಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಸಿಂದಗಿ ಉಪ ಚುನಾವಣೆ ಹಿನ್ನೆಲೆ ಹಿಂದುಳಿದ ವರ್ಗಗಳ ಮತಗಳನ್ನು ಸೆಳೆಯಲು ಬಿಜೆಪಿ ರಣತಂತ್ರ ಮಾಡಿದ್ದು, ಈ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಕಾರ್ಯಕಾರಿಣಿ ನಡೆಯಿತು. ಕಾರ್ಯಕ್ರಮಕ್ಕೂ ಮುನ್ನ ಕೇಸರಿ ಪೇಟ್ ಸುತ್ತಿಕೊಂಡು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲರನ್ನು ಬಿಜೆಪಿ ಕಾರ್ಯಕರ್ತೆಯರು ಸ್ವಾಗತಿಸಿದರು.
ಸಭೆಯಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ, ನಗರ ಶಾಸಕ ಬಸನಗೌಡ ಯತ್ನಾಳ, ನೆ.ಲ. ನರೇಂದ್ರ ಬಾಬು, ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಸೋಮನಗೌಡ ಪಾಟೀಲ, ಮಹೇಶ ಟೆಂಗಿನಕಾಯಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ, ವಿಜುಗೌಡ ಪಾಟೀಲ, ಸಾಬು ಮಾಶ್ಯಾಳ ಇದ್ದರು.