News Kannada
Tuesday, September 27 2022

ವಿಜಯಪುರ

ಪಕ್ಷ ಒಲ್ಲದ ಮನಸ್ಸಿನಿಂದ ಈಶ್ವರಪ್ಪ ಅವರ ರಾಜೀನಾಮೆ ಸ್ವೀಕರಿಸಿದೆ; ಪ್ರಹ್ಲಾದ ಜೋಶಿ - 1 min read

Dharwad: The act of throwing eggs at Siddaramaiah's car is not justified
Photo Credit :

ವಿಜಯಪುರ : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಈಶ್ವರಪ್ಪ ಅವರೇ ಸ್ವಂತ ನಿರ್ಧಾರ ಕೈಗೊಂಡಿದ್ದು, ಪಕ್ಷ ಒಲ್ಲದ ಮನಸ್ಸಿನಿಂದ ರಾಜೀನಾಮೆ ಸ್ವೀಕರಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಶುಕ್ರವಾರ ತಮ್ಮ ಮನೆ ದೇವರು ತೊರವಿ ಲಕ್ಷ್ಮೀನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಈಗ ನಡೆಯುತ್ತಿರುವ ಬೆಳವಣಿಗೆ ಹಿಂದೆ ಕುತಂತ್ರವಿದ್ದು, ಕಾಂಗ್ರೆಸ್ ಕೈವಾಡದ ಶಂಕೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದರು.

ಸಂಪುಟ ವಿಸ್ತರಣೆ ಯಾವಾಗ ನಡೆಯುತ್ತದೆ ಎಂಬುದು ತಿಳಿಯದು. ಖಾಲಿ ಇರುವ ಸ್ಥಾನಗಳಿಗೆ ಭರ್ತಿಗೆ ವಿಸ್ತರಣೆ ಆಗಲಿದೆ. ವಿಜಯಪುರ ಜಿಲ್ಲೆಗೆ ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಕೊರಗು ಬೇಡ. ಸಂಪುಟ ವಿಸ್ತರಣೆ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೈಕಮಾಂಡ್ ನಾಯಕರು ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತು ಯಾವುದೇ ವಿಚಾರ ಪಕ್ಷದ ಮುಂದಿಲ್ಲ. ಬೊಮ್ಮಾಯಿ ಅವರು ಅತ್ಯಂತ ಸಮರ್ಥವಾಗಿ ಆಡಳಿತ ನಿಭಾಯಿಸುತ್ತಿದ್ದು, ಬದಲಾವಣೆ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.

See also  ಗೆಲ್ಲುವ ಉದ್ದೇಶದಿಂದ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ನಿಲ್ಲಿಸಿಲ್ಲ- ಸಿದ್ದರಾಮಯ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು