ವಿಜಯಪುರ: ಚಲಿಸುತ್ತಿದ್ದ ರೈಲಿನಡಿಗೆ ಸಿಲುಕಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ನಗರದ ಗಣೇಶ ನಗರ ಬಳಿಯ ಇಬ್ರಾಹಿಂಪುರ ರೈಲ್ವೆ ಹಳಿಯಲ್ಲಿ ಈ ಘಟನೆ ನಡೆದಿದೆ. ಗದಗಿ ಲೇಔಟ್ ನಿವಾಸಿ ಗುರುರಾಜ್ ಪುರೋಹಿತ್ (45) ಮೃತಪಟ್ಟವರು.
ನವೆಂಬರ್ 12ರ ಶನಿವಾರ ಬೆಳಿಗ್ಗೆ 7.00ರ ಸುಮಾರಿಗೆ ಮುಂಬೈ ಮತ್ತು ಗದಗ ನಡುವೆ ಚಲಿಸುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಕೊನೆಯುಸಿರೆಳೆದರು. ಸ್ಥಳಕ್ಕೆ ಭೇಟಿ ನೀಡಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದರು.
ವಿಜಯಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸಹಾಯವಾಣಿಗೆ ಕರೆ ಮಾಡಿ:
ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು