News Kannada
Saturday, January 28 2023

ವಿಜಯಪುರ

ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

HDK opposes giving ticket to Bhavani Revanna from Hassan, rift in family
Photo Credit : IANS

ಮುದೇಬಿಹಾಳ: ಜೆಡಿಎಸ್ ಪಕ್ಷದ ಹಾಸನದಲ್ಲಿ ಅನಗತ್ಯ ಮಾಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ನನ್ನ ನೇತೃತ್ವದ ಮೈತ್ರಿ ಸರಕಾರವನ್ನು ಕೆಡವಲು ಧರ್ಮಸ್ಥಳದ ಸಿದ್ದವನದಲ್ಲಿ ನಡೆಸಿದ ಷಡ್ಯಂತ್ರವನ್ನು ಬಿಚ್ಚಿಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮುದ್ದೇಬಿಹಾಳ ವಿಧಾನಸಭೆ ಕ್ಷೇತ್ರದ ಬಳವಾಟ ಗ್ರಾಮದಲ್ಲಿ ಪಂಚರತ್ನ ರಥಯಾತ್ರೆ ನಿಮಿತ್ತ ಗ್ರಾಮ ವಾಸ್ತವ್ಯ ಹೂಡಿದ್ದ ಮಾಜಿ ಮುಖ್ಯಮಂತ್ರಿ ಅವರು ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದರು.

ಸಿದ್ದರಾಮಯ್ಯ ವಿರುದ್ಧ ಕೆಂಡಾಮಂಡಲರಾದ ಮಾಜಿ ಮುಖ್ಯಮಂತ್ರಿಗಳು, ಜನರು ಕಷ್ಟ ಹೇಳಿಕೊಂಡು ನಮ್ಮ ಬಳಿ ನಿರಂತರವಾಗಿ ಜನ ಬರುತ್ತಾರೆ. ಸುಮ್ಮನೆ ಜೆಡಿಎಸ್ ಪಕ್ಷದ ಬಗ್ಗೆ ಏನೇನು ಮಾತನಾಡಬೇಡಿ ಅವರು ಎಂದು ತರಾಟೆಗೆ ತೆಗೆದುಕೊಂಡರು.

ಮುಖ್ಯಮಂತ್ರಿ ಆಸೆಗಾಗಿ ಪಕ್ಷ ಬಿಟ್ಟು ಹೋಗಿದ್ದು ನೆನಪು ಇದೇಯಾ ನಿಮಗೆ? ನಿಮ್ಮಿಂದ ನಾನು ಪಾಠವನ್ನು ಹೇಳಿಸಿಕೊಳ್ಳುವ ಅಗತ್ಯ ನನಗೆ ಇಲ್ಲ. ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರು ಕಟ್ಟಿದ ಪಕ್ಷವ ಉಳಿಸಿಕೊಂಡು ಹೊರಟಿದ್ದೇವೆ ನಾವು. ಅಂಥ ಪಕ್ಷವನ್ನು, ಅವರ ಸಿದ್ದಾಂತವನ್ನು ಗಾಳಿಗೆ ಬಿಟ್ಟು ಸಿಎಂ ಕುರ್ಚಿ ಹಿಂದೆ ಓಡಿ ಹೋದವರು ಯಾರು? ನಿಮ್ಮ ಯೋಗ್ಯತೆ ಏನು ಅಂತಾ ಗೊತ್ತಿದೆ ಎಂದು ಹೆಚ್​ಡಿಕೆ ಅವರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಲು ನೀವ್ ಏನು ಮಾಡಿದಿರಿ ಎನ್ನುವುದು ಗೊತ್ತಿದೆ. ಎಲ್ಲಿ ಕೂತು, ಯಾರ ಜತೆ ಕೂಡಿ ಕುತಂತ್ರ ಮಾಡಿದಿರಿ ಎನ್ನುವುದು ನನಗೆ ತಿಳಿದಿದೆ. ಬಿಜೆಪಿಗೆ ಅಧಿಕಾರ ಹೋಗಬಾರದು ಎಂದು ನಿಮ್ಮ ಪಕ್ಷದ ವರಿಷ್ಠರು ನಮ್ಮ ಬಾಗಿಲಿಗೆ ಬಂದಿದ್ದರು. ಖರ್ಗೆ, ಪರಮೇಶ್ವರ್, ಡಿಕೆ ಶಿವಕುಮಾರ್ ಇದ್ದಾರೆ. ಅವರಿಗೆ ಇದೆಲ್ಲಾ ಗೊತ್ತಿಲ್ಲವೆ? ಆಗ ನೀವು ಎಲ್ಲಿದ್ದೀರಿ? ಎಂದು ಕಿಡಿಕಾರಿದರು ಕುಮಾರಸ್ವಾಮಿ ಅವರು.

ನನ್ನ ಸರಕಾರ ಹೇಗೆ ಹೋಯಿತು? ಅದನ್ನು ತೆಗೆಯಲು ನಿಮ್ಮ ಕಾಣಿಕೆ ಏನು? ಬಿಜೆಪಿಯವರ ಜತೆ ಹೇಗೆಲ್ಲಾ ಕುಮ್ಮಕ್ಕಾಗಿದ್ದಿರಿ? ಯಾರನ್ನೆಲ್ಲ ಎಲ್ಲೆಲ್ಲಿಗೆ ಕಲಿಸಿದಿರಿ ಎನ್ನುವುದು ನನಗೆ ಮಾಹಿತಿ ಇದೆ. ಆದರೆ, ಜಾತ್ಯತೀತ ತತ್ವ ಆಸ್ತಿ ಎನ್ನುವ ರೀತಿ ವರ್ತಿಸುತ್ತಿದ್ದಿರಿ. ಜಯಪ್ರಕಾಶ್ ನಾರಾಯಣ್ ಅವರ ಸಿದ್ದಾಂತಕ್ಕೆ ನೀವು ಬದ್ಧರಾಗಿ ಇದ್ದಿದರೆ ನೀವು ಅಧಿಕಾರಕ್ಕಾಗಿ ಮಾತೃಪಕ್ಷವನ್ನು ಕಾಲಿನಲ್ಲಿ ಒದ್ದು ಹೋಗುತ್ತಿರಲಿಲ್ಲ ಎಂದು ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಗುಡುಗಿದರು.

ಬಿಜೆಪಿ ಪಕ್ಷದವರಿಗಿಂತ ಭ್ರಷ್ಟಾಚಾರದಲ್ಲಿ ನಿವೇನೂ ಕಮ್ಮಿ ಇಲ್ಲ. ನೀವು ಬೇಕಾದಷ್ಟು ಅಕ್ರಮಗಳನ್ನು ನಡೆಸಿದ್ದೀರಿ. ನಾನು ಎತ್ತಿದ ಪ್ರಶ್ನೆಗಳಿಗೆ ಈವರೆಗೆ ಉತ್ತರ ಕೊಡಲು ನಿಮ್ಮಿಂದ ಉತ್ತರ ಕೊಡಲು ಆಗಿಲ್ಲ. ಮತ್ತೆ ನಮ್ಮ ಪಕ್ಷದ ಬಗ್ಗೆ ನಾಲಿಗೆ ಜಾರಿ ಬಿಡುತ್ತಿರಾ? ನಾಚಿಕೆ ಇಲ್ಲವೇ? ಎಂದು ಅವರು ಕೇಳಿದರು.

ನಾನು ಹೋಟೆಲ್ ನಲ್ಲಿ ಇದ್ದೆ ಎಂದು ಹೇಕುತ್ತಿರಲ್ಲ, ನಿಮ್ಮ ಸರಕಾರ ಹೋದ ಕೂಡಲೇ ಸರಕಾರಿ ಮನೆ ಖಾಲಿ ಮಾಡಿಕೊಡಬೇಕಿತ್ತು. ನೀವು ಹಾಗೆ ಮಾಡಲಿಲ್ಲ. ನಾನು ಹೋಟೆಲ್ ನಲ್ಲಿಯೇ ಇದ್ದಿದ್ದರೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೂರಾರು ಕೋಟಿ ಹಣ ಹೇಗೆ ಬಿಡುಗಡೆ ಆಯಿತು? ನಿಮ್ಮ ಪಕ್ಷದ ಶಾಸಕರಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ಹೇಗೆ ಬಿಡುಗಡೆ ಆಯಿತು? ಎಂದು ಹೇಳಿ ಎಂದು ಕುಮಾರಸ್ವಾಮಿ ಅವರು ಪ್ರತಿಪಕ್ಷ ನಾಯಕರನ್ನು ತರಾಟೆಗೆ ತೆಗೆದುಕೊಂಡರು.

See also  ವಿಜಯಪುರ: ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವು

ನಾನು ಸದಾ ಜನಗಳ ಮಧ್ಯೆ ಇರುವ ಸಾಮಾನ್ಯ ವ್ಯಕ್ತಿ. ಆದರೆ ನೀವು ಸಂಜೆ 6 ಗಂಟೆಯಾದ ಮೇಲೆ ಯಾರ ಕೈಗೆ ಸಿಗುತ್ತಿದ್ದಿರಿ? ಮಧ್ಯಾನ್ಹ ಊಟಕ್ಕೆಂದು ಹೋದರೆ ನಾಪತ್ತೆ ಆಗಿಬಿಡುತ್ತಿದ್ದಿರಿ! ಈ ಬಗ್ಗೆ ಕೂಡ ನೀವು ಭಾಷಣ ಮಾಡಬೇಕಲ್ಲವೇ? ಎಂದು ಪ್ರಶ್ನೆ ಮಾಡಿದರು ಮಾಜಿ ಮುಖ್ಯಮಂತ್ರಿಗಳು.

ಪ್ರಜಾಧ್ವನಿ ಅಲ್ಲ, ಅಧಿಕಾರಕ್ಕಾಗಿ ಕಾಂಗ್ರೆಸ್ ಧ್ವನಿ:

ಪಂಚರತ್ನ ರಥಯಾತ್ರೆ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ ಅವರ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಅವರು; ಹಾಗಾದರೆ ನಿಮ್ಮದೇನು? ನಿಮ್ಮದು ಪ್ರಜಾಧ್ವನಿ ಅಲ್ಲ, ಅಧಿಕಾರಕ್ಕಾಗಿ ನಡೆಸುತ್ತಿರುವ ಧ್ವನಿ ಎಂದು ಚಾಟಿ ಬೀಸಿದರು.

ಪಂಚರತ್ನ ರಥಯಾತ್ರೆ 50 ದಿನ ದಾಟಿ ಮುನ್ನಡೆಯುತ್ತಿದೆ. ಅದು ಇವರೆಲ್ಲರ ನಿದ್ದೆಗೆಡಿಸಿದೆ. ಹೋದ ಕಡೆ ಎಲ್ಲಾ ನಮಗೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ಸಹಿಸಿಕೊಳ್ಳುವುದು ಅವರಿಗೆ ಆಗುತ್ತಿಲ್ಲ.

ಮುದ್ದೇಬಿಹಾಳ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸಿ.ಎನ್. ಸೋಲಾಪೂರ, ಪಕ್ಷದ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ ಇತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು