News Kannada
Saturday, February 24 2024
ಬೆಂಗಳೂರು

ಮುಂದಿನ ದಸರಾ ವೇಳೆಗೆ ಮೈಸೂರು – ಬೆಂಗಳೂರು 10 ಪಥದಗಳ ಹೆದ್ದಾರಿ ಸಂಪೂರ್ಣವಾಗುವ ಸಾಧ್ಯತೆ

Photo Credit :
ಬೆಂಗಳೂರು :ಮೈಸೂರು ಮತ್ತು ಬೆಂಗಳೂರು ನಡುವಣ ಹೆದ್ದಾರಿಯನ್ನು ಹತ್ತು ಪಥಗಳ  ಹೆದ್ದಾರಿಯನ್ನಾಗಿ ಪರಿವರ್ತನೆ ಮಾಡುತ್ತಿದ್ದು, ಮುಂದಿನ  ವರ್ಷದ ದಸರಾ ವೇಳೆಗೆ ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ ಹೆದ್ದಾರಿ ಅನುವಾಗಲಿದೆ.
ಸದ್ಯ ಈ ಎರಡು ನಗರಗಳ ನಡುವೆ 3 ಗಂಟೆ ಪ್ರಯಾಣ ಮಾಡಬೇಕಾಗಿದೆ. 8 ಸಾವಿರದ 172 ಕೋಟಿ ರೂಪಾಯಿ ವೆಚ್ಚದಲ್ಲಿ ಹತ್ತು ಪಥಗಳ ಕಾಮಗಾರಿ ತ್ವರಿತವಾಗಿ ನಡೆಯುತ್ತಿದ್ದು ಮುಂದಿನ ದಸರಾ ವೇಳೆಗೆ ರಾಜ್ಯದ ಜನತೆಗೆ ದಸರಾ ಕೊಡುಗೆಯಾಗಿ ಸಂಚಾರದ ಅವಧಿ ಕಡಿಮೆಯಾಗಲಿದೆ.
ಹಾಲಿ ಕಾಮಗಾರಿ ಪೂರ್ಣಗೊಂಡರೆ ಎರಡು ನಗರಗಳ ಸಂಚಾರದ ಅವಧಿ ಕೇವಲ 90 ನಿಮಿಷಕ್ಕೆ ಇಳಿಯಲಿದೆ. ಮುಂದಿನ ದಸರಾ ವೇಳೆಗೆ ಕಾಮಗಾರಿ ಪೂರ್ಣಗೊಂಡು ಹೆದ್ದಾರಿ ಸಾರ್ವಜನಿಕರ ಸಂಚಾರ ಸೇವೆಗೆ ಲಭ್ಯವಾಗಲಿದೆ ಎಂದು ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರು ರಾಜ್ಯದ ಜನತೆಗೆ ಟ್ವೀಟ್ ಮೂಲಕ ಸಿಹಿ ಸುದ್ದಿ ನೀಡಿದ್ದಾರೆ.
ಭಾರತಮಾಲಾ ಪರಿಯೋಜನ ಹಂತ-1ರ ಅಡಿಯಲ್ಲಿ ಉಭಯ ನಗರಗಳನ್ನು ಸಂಪರ್ಕಿಸುವ ರಸ್ತೆಯನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ಎರಡು ಪ್ಯಾಕೇಜ್ ಗಳಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಸಚಿವ ನಿತಿನ್ ಗಡ್ಕರಿ ಕಾಮಗಾರಿಗಳ ಚಿತ್ರಗಳನ್ನು ಸಹ ಟ್ವೀಟ್ ಮಾಡಿದ್ದಾರೆ.
ಪ್ರಸ್ತುತ ಇರುವ 135 ಕಿಲೋಮೀಟರ್ ರಸ್ತೆ ಸದ್ಯ 4 ಪಥದ ಹೆದ್ದಾರಿಯಾಗಿದ್ದು, ವಾಹನ ದಟ್ಟಣೆ ಹೆಚ್ಚಾದ ಕಾರಣ 10 ಪಥವಾಗಿ ಅಭಿವೃದ್ಧಿಗೊಳಿಸಲಾಗುತ್ತಿದೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು