ನವದೆಹಲಿ : ವರ್ಕ್ ಫ್ರಮ್ ಹೋಮ್ ಗೆ ಮಾನ್ಯತೆ ನೀಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ದೆಹಲಿಯಲ್ಲಿ ಐಟಿ – ಬಿಟಿ ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ದೆಹಯಲಿಯಲ್ಲಿ ಮಾತನಾಡಿದ ಸಚಿವರು ನೂತನ ಶಿಕ್ಷಣ ನೀತಿ ಬಗ್ಗೆ ಕೇಂದ್ರ ಶಿಕ್ಷಣ ಸಚಿವರ ಜತೆಗೆ ಚರ್ಚಿಸಿದ್ದೇನೆ. ರಾಜ್ಯಕ್ಕೆ ಬಂದು ಉನ್ನತ ಮಟ್ಟದ ಸಭೆ ನಡೆಸುವುದಾಗಿ ಹೇಳಿದ್ದಾರೆ, ಅವಸರವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವುದಿಲ್ಲ. ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ ನಡೆಯುತ್ತಿದೆ ಎಂದು ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.
ಪ್ರಸ್ತುತ ವರ್ಕ್ ಫ್ರಮ್ ಹೋಮ್ ಪದ್ಧತಿ ಹೆಚ್ಚಾಗಿದೆ. ಹೀಗಾಗಿ ವರ್ಕ್ ಫ್ರಮ್ ಹೋಮ್ಗೆ ಮಾನ್ಯತೆ ನೀಡುವಂತೆ ಮನವಿ ಮಾಡಲಾಗಿದೆ. ಕೇಂದ್ರದ ಐಟಿ ಸಚಿವರು 24ನೇ ಟೆಕ್ ಸಮ್ಮಿಟ್ನಲ್ಲಿದ್ದಾರೆ. ಐಟಿ ಇಲಾಖೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.