News Karnataka Kannada
Tuesday, April 16 2024
Cricket
ಬೆಂಗಳೂರು

ಮುಂದಿನ ಐದು ವರ್ಷದಲ್ಲಿ ಮಲೆ ಮಹಾದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ದ : ಬಸವರಾಜ ಬೊಮ್ಮಾಯಿ

New Project 2021 09 22t175444.297
Photo Credit :

ಬೆಂಗಳೂರು : ಮಲೆ ಮಹಾದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ದವಾಗಿದ್ದು, ಮುಂದಿನ ಐದು ವರ್ಷದಲ್ಲಿ ಸಂಪೂರ್ಣ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಸಿಎಂ, ಮಲೆ ಮಹಾದೇಶ್ವರ ದಕ್ಷಿಣ ಕರ್ನಾಟಕದ ಪ್ರಸಿದ್ಧ ಕ್ಷೇತ್ರ. ಹಳೆ ಮೈಸೂರು ಭಾಗದ ಜನರು ಹೆಚ್ಚಾಗಿ ನಡೆದುಕೊಳ್ಳುವ ದೇವಸ್ಥಾನ. ಈ ಕ್ಷೇತ್ರದ ಅಭಿವೃದ್ಧಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಕೊಡುಗೆ ದೊಡ್ಡದಿದೆ. ಹಿಂದೆ ಚಾಮರಾಜನಗರ ಜಿ ಉಸ್ತುವಾರಿ ಸಚಿವರಾಗಿದ್ದ ವಿ.ಸೋಮಣ್ಣ ಹಾಗೂ ಸುರೇಶ್‌ಕುಮಾರ್ ಅವರು ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಮಲೆಮಹಾದೇಶ್ವರ ಬೆಟ್ಟದ ಅಭಿವೃದ್ಧಿಗೆ ಈಗಾಗಲೇ ಪ್ರಾಧಿಕಾರ ಯೋಜನೆ ರೂಪಿಸಿರುವುದನ್ನು ಜಾರಿಗೊಳಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಚಿವರಾದ ಎಸ್. ಟಿ. ಸೋಮಶೇಖರ್,ಶಶಿಕಲಾ ಜೊಲ್ಲೆ , ವಿ. ಸುನಿಲ್‌ಕುಮಾರ್, ಶಾಸಕರಾದ ಎನ್.ಮಹೇಶ್, ಪುಟ್ಟರಂಗ ಶೆಟ್ಟಿ, ನರೇಂದ್ರ, ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಜೀವ್, ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು