News Karnataka Kannada
Tuesday, April 23 2024
Cricket
ಬೆಂಗಳೂರು

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಮುಸುಕಿದ ವಾತಾವರಣ, 3 ದಿನ ಭಾರೀ ಮಳೆಯಾಗುವ ಮುನ್ಸೂಚನೆ

Rain
Photo Credit :

ಬೆಂಗಳೂರು,ನ.10 : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರೆದಿದ್ದು, ಶುಕ್ರವಾರ ಮಳೆಯಾಗುವ ಮುನ್ಸೂಚನೆಗಳಿವೆ.

ಕಳೆದ ಸೋಮವಾರ ಮುಂಜಾನೆಯಿಂದಲೇ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಭಾಗದ ಹಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗಿತ್ತು. ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿತ್ತು.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ತನ್ನ ಶಕ್ತಿಯನ್ನು ವೃದ್ಧಿಸಿಕೊಳ್ಳದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅದರ ಪರಿಣಾಮ ಅಷ್ಟಾಗಿ ಉಂಟಾಗಿಲ್ಲ. ಇದರಿಂದ ಅಲ್ಲಲ್ಲಿ ಸಾಧಾರಣ ಮಳೆ ಹೊರತುಪಡಿಸಿದರೆ ಭಾರೀ ಮಳೆಯಾಗಿಲ್ಲ.

ತಮಿಳುನಾಡಿನಲ್ಲಿ ವಾಯುಭಾರ ಕುಸಿತದ ಪರಿಣಾಮ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ನವೆಂಬರ್ 12ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು.

ಅರಬ್ಬೀ ಸಮುದ್ರದಲ್ಲೂ ವಾಯುಭಾರ ಕುಸಿತ ಉಂಟಾಗಿದೆ. ಆದರೆ ಅದು ಪಶ್ಚಿಮಾಭಿಮುಖವಾಗಿ ಚಲಿಸುತ್ತಿರುವುದರಿಂದ ನಮ್ಮ ರಾಜ್ಯಕ್ಕೆ ಪರಿಣಾಮವೂ ಇಲ್ಲ. ಅದರಿಂದ ಮಳೆಯೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ತಮಿಳುನಾಡು ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ ಕ್ರಿಯಾಶೀಲವಾಗಿರುವುದರಿಂದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ಮಂಡ್ಯ, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಕೊಡುಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ನ.12ರಂದು ಮಳೆಯಾಗುವ ಸಾಧ್ಯತೆಗಳು ಇವೆ.

ಆದರೆ ಉತ್ತರ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ವಿರಳವಾಗಿದೆ. ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳು ಈವರೆಗೂ ಕಂಡುಬಂದಿಲ್ಲ ಎಂದು ಅವರು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು