News Kannada
Thursday, December 08 2022

ಬೆಂಗಳೂರು

ಕೋವಿಡ್: ಮೃತ ಪತ್ರಕರ್ತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ

Photo Credit :

ಬೆಂಗಳೂರು: ಕೋವಿಡ್ 19 ಸೋಂಕಿಗೆ ಸಿಲುಕಿ ಸಾವನ್ನಪ್ಪಿದ  ಇಬ್ಬರು ಪತ್ರಕರ್ತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಿತ್ತು. ಇದೀಗ ಮನವಿ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪರಿಹಾರವನ್ನು ಮಂಜೂರು ಮಾಡಿದ್ದಾರೆ.

ಕಲಬುರ್ಗಿ ಜಿಲ್ಲೆಯ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ ಮತ್ತು ಕೊಡಗು ಜಿಲ್ಲೆಯ ವಿರಾಜಪೇಟೆಯ ಮೈಸೂರು ಮಿತ್ರ ಪತ್ರಿಕೆಯ ವರದಿಗಾರ ಎಸ್.ಎಂ.ಚೆಂಗಪ್ಪ ಅವರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರು. ಅವರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ದೊರೆಯಲಿದೆ.

ಪತ್ರಕರ್ತರಾದ ಜಯತೀರ್ಥ ಕಾಗಲಕರ ಅವರಿಗೆ ಪರಿಹಾರ ನೀಡುವಂತೆ ಕಲಬುರಗಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಮತ್ತು ಎಸ್.ಎಂ.ಚೆಂಗಪ್ಪ ಅವರಿಗೆ ಪರಿಹಾರ ಮಂಜೂರು ಮಾಡುವಂತೆ ಕೊಡಗು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘಗಳು, ರಾಜ್ಯ ಸಂಘಕ್ಕೆ ಮನವಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಕೆಯುಡಬ್ಲ್ಯೂಜೆ ಮನವಿ ಪರಿಗಣಿಸಿ ಪರಿಹಾರ ಮಂಜೂರು ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಭಿನಂದನೆ ತಿಳಿಸಲಾಗಿದೆ.

See also  ಯುವತಿ ಅಂಗಾಂಗ ಮುಟ್ಟಿ ಹಲ್ಲೆ: ದೂರು ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು