NewsKarnataka
Sunday, January 16 2022

ಬೆಂಗಳೂರು

ಯಡಿಯೂರಪ್ಪರ ಬೆಂಬಲಕ್ಕೆ ನಿಂತ ಮಠಾಧೀಶರು: ಸಮಾವೇಶದಲ್ಲಿ 500ಕ್ಕೂ ಅಧಿಕ ಮಂದಿ ಭಾಗಿ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಬೆಂಬಲಿಸಿ ರಾಜ್ಯದ ವಿವಿಧ ಮಠಾಧೀಶರ ಸಮಾವೇಶ ಆರಂಭವಾಗಿದೆ. ಈ ಸಮಾವೇಶದಲ್ಲಿ ವಿವಿಧ ಮಠಗಳ ೫೦೦ಕ್ಕೂ ಹೆಚ್ಚು ಮಠಾಧೀಶರು ಪಾಲ್ಗೊಂಡಿದ್ದಾರೆ.

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವ ತೀರ್ಮಾನ ಕೈಗೊಳ್ಳದಂತೆ ಬಿಜೆಪಿ ಹೈಕಮಾಂಡ್‌ ಮೇಲೆ ಒತ್ತಡ ತರುವ ಉದ್ದೇಶದಿಂದ ಈ ಸಮಾವೇಶ ಆಯೋಜಿಸಲಾಗಿದೆ.

ಈ ಸಮಾವೇಶವು ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ, ತಿಪಟೂರಿನ ರುದ್ರಮುನಿ ಸ್ವಾಮೀಜಿ ಮತ್ತು ಚಿತ್ರದುರ್ಗದ  ಬಸವಕುಮಾರ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿದೆ.

ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ಬಿಜೆಪಿ ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಬೆಂಬಲ ಕಳೆದುಕೊಳ್ಳುತ್ತದೆ ಎಂಬ ಸಂದೇಶವನ್ನು ಬಿಜೆಪಿ ವರಿಷ್ಠರಿಗೆ ರವಾನಿಸುವುದು ಈ ಸಮಾವೇಶದ ಪ್ರಮುಖ ಉದ್ದೇಶ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149
Subscribe to our Brand New YouTube Channel

Subscribe Newsletter

Get latest news karnataka updates on your email.