ಬೆಂಗಳೂರು: ಕೋವಿಡ್ ಲಾಕ್ಡೌನ್ ಸಹಾಯಧನ ₹2 ಸಾವಿರ ಪಡೆಯಲು ಬಿಪಿಎಲ್ ಕಾರ್ಡ್ ಕಡ್ಡಾಯಗೊಳಿಸಿರುವ ಸರ್ಕಾರದ ಷರತ್ತು ಮಾರ್ಪಡಿಸುವುದು ಸೂಕ್ತ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಮನೆಗೆಲಸದ ಕಾರ್ಮಿಕರಿಗೆ ಸಹಾಯಧನ ನೀಡುವ ವಿಷಯದಲ್ಲಿ ಸಲ್ಲಿಕೆಯಾಗಿರುವ ಮಧ್ಯಂತರ ಅರ್ಜಿ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
2021 ಮೇ 21ರ ಸರ್ಕಾರಿ ಆದೇಶದ ಪ್ರಕಾರ, ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳ ಕಾರ್ಮಿಕರಿಗೆ ಈ ಸಹಾಯಧನ ಯೋಜನೆ ಸೀಮಿತಗೊಳಿಸಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರದ ಹಲವು ಮನೆಗೆಲಸ ಕಾರ್ಮಿಕರು ಇದ್ದಾರೆ ಎಂದು ಅರ್ಜಿದಾರರು ವಾದಿಸಿದರು. ವಿಚಾರಣೆಯನ್ನು ಆ.6ಕ್ಕೆ ಮುಂದೂಡಿತು.