NewsKarnataka
Wednesday, December 08 2021

ಬೆಂಗಳೂರು

23ರಿಂದ 9, 10ನೇ ತರಗತಿ ಪ್ರಾರಂಭ: ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಇದೇ 23ರಿಂದ 9 ಮತ್ತು 10ನೇ ತರಗತಿ ಪ್ರಾರಂಭಿಸಲು ರಾಜ್ಯ ಸರ್ಕಾರ ಸೋಮವಾರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ಮಾಡಿದೆ.

9 ಮತ್ತು 10ನೇ ತರಗತಿಗಳು ಸದ್ಯಕ್ಕೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ನಡೆಯುತ್ತವೆ. ಶಾಲೆಗೆ ಹಾಜರಾಗಲು ವಿದ್ಯಾರ್ಥಿಗಳು ಪೋಷಕರಿಂದ ಸಮ್ಮತಿ ಪತ್ರ ಪಡೆಯಬೇಕು ಎಂದು ಸೂಚಿಸಲಾಗಿದೆ.

ಮೊದಲೇ ಹೇಳಿದಂಥೆ ಪಾಸಿಟಿವಿಟಿ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಯಲ್ಲಿ ಶಾಲೆಗಳಲ್ಲಿ ಶಾಲೆಗಳು ಆರಂಭವಾಗಲಿದೆ. 9 ಮತ್ತು 10ನೇ ತರಗತಿ ಶಾಲೆ ತೆರೆಯಲು ಅನುಮತಿ ನೀಡಲಾಗಿದೆ. ಬೆಳಗಿನ ಅವಧಿಯಲ್ಲಿ ಭೌತಿಕ ತರಗತಿ ಮಾಡಲು ಅನುಮತಿ ನೀಡಲಾಗಿದೆ. ಶಾಲೆಗೆ ಆಗಮಿಸಲು ಪೋಷಕರ ಅನುಮತಿ ಪತ್ರ ಕಡ್ಡಾಯ ಜತೆಗೆ ಮಗುವಿನ ಆರೋಗ್ಯ ಪ್ರಮಾಣ ಪತ್ರ‌ ಕಡ್ಡಾಯವಾಗಿದೆ.

ಮನೆಯಿಂದಲೇ ಮಕ್ಕಳು ಕುಡಿಯುವ ನೀರು, ಉಪಹಾರ ತರಬೇಕು ಭೌತಿಕ ತರಗತಿ ಹಾಜರಾತಿ ಕಡ್ಡಾಯವಲ್ಲ. ಆನ್‌ಲೈನ್ ಅಥವಾ ಭೌತಿಕ ಎರಡರಲ್ಲಿ ಒಂದರಲ್ಲಿ ಹಾಜರಾತಿ ಅಗತ್ಯ. ಶಾಲೆಯಲ್ಲಿ ಮಕ್ಕಳಿಗೆ ಕುಡಿಯಲು ಬಿಸಿನೀರಿನ ವ್ಯವಸ್ಥೆ ಮಾಡಬೇಕು ಎಂದು ತಿಳಿಸಲಾಗಿದೆ.

ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ಭೌತಿಕ ತರಗತಿ ನಡೆಯಲಿದೆ. ಶನಿವಾರ ಮಾತ್ರ‌ ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ಭೌತಿಕ ತರಗತಿ ನಡೆಯಲಿದೆ ಎಂದು ತಿಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!