ಬೆಂಗಳೂರು : ಕಳೆದ ಕೆಲ ದಿನಗಳ ಬಳಿಕ ರಾಜ್ಯದ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ 1 ಸಾವಿರಕ್ಕೆ ಇಳಿಕೆಯಾಗಿದೆ. ಸೋಮವಾರ 1,065 ಹೊಸ ಕೋವಿಡ್ ಕೇಸ್ಗಳು ದೃಢಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 29,30,529ಕ್ಕೆ ಏರಿಕೆಯಾಗಿದೆ.
ಒಂದು ದಿನದ ಅಂತರದಲ್ಲಿ 1,13,580 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಮತ್ತೆ ಪಾಸಿಟಿವಿಟಿ ದರ ಶೇ. 1ಕ್ಕಿಂತ (ಶೇ.0.93) ಕೆಳಕ್ಕಿಳಿದೆ.ಈ ಅವಧಿಯಲ್ಲಿ 28 ಮಂದಿ ಸಾವನ್ನಪ್ಪಿದ್ದು, ಈವರೆಗೆ ಸತ್ತವರ ಸಂಖ್ಯೆ 37,007ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡದಲ್ಲಿ 5, ಬೆಂಗಳೂರು ಹಾಗೂ ಮೈಸೂರಿನಲ್ಲಿ ತಲಾ 4, ಕೊಡಗು ಮತ್ತು ಹಾಸನದಲ್ಲಿ ತಲಾ 3 ಮಂದಿ ಸಾವನ್ನಪ್ಪಿದ್ದಾರೆ. ಉಳಿದ ಜಿಲ್ಲೆಗಳಲ್ಲಿ 2 ಅಥವಾ ಅದಕ್ಕಿಂತ ಕಡಿಮೆ ಸಂಖ್ಯೆಯ ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ.
ಸೋಮವಾರ ಹೆಚ್ಚು ಕಡಿಮೆ ಎಲ್ಲಾ ಜಿಲ್ಲೆಗಳಲ್ಲೂ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಆದರೆ ರಾಜಧಾನಿ ಬೆಂಗಳೂರಿಗಿAತಲೂ ಹೆಚ್ಚು ಕೇಸ್ಗಳು ದಕ್ಷಿಣ ಕನ್ನಡದಲ್ಲಿ ದೃಢಪಟ್ಟಿವೆ.ದಕ್ಷಿಣ ಕನ್ನಡದಲ್ಲಿ 284, ಬೆಂಗಳೂರಿನಲ್ಲಿ 270, ಉಡುಪಿಯಲ್ಲಿ 107 ಹೊಸ ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ 100ಕ್ಕಿಂತ ಕಡಿಮೆ ಹೊಸ ಕೇಸ್ಗಳು ದೃಢಪಟ್ಟಿದ್ದರೆ, 14 ಜಿಲ್ಲೆಗಳಲ್ಲಿ 10ಕ್ಕಿಂತ ಕಡಿಮೆ ಪ್ರಕರಣಗಳು ಪತ್ತೆಯಾಗಿವೆ.