ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸರಿಸಮನಾದ ನಾಯಕ ದೇಶದ ಯಾವುದೇ ಪಕ್ಷದಲ್ಲಿಯೂ ಇಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ನಡೆದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅಶೋಕ್, “ದೇಶದಲ್ಲಿ ಕಾಂಗ್ರೆಸ್ ನೆಲಕಚ್ಚುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಂಗ್ರೆಸ್ ಈಗಾಗಲೇ ಎಲ್ಲಾ ರಾಜ್ಯಗಳಲ್ಲಿಯೂ ತನ್ನ ಹಿಡಿತ ಕಳೆದುಕೊಳ್ಳುತ್ತಿದ್ದು, ನಿಧಾನವಾಗಿ ರಾಷ್ಟ್ರೀಯ ಪಕ್ಷದ ತನ್ನ ಸ್ಥಾನಮಾನವನ್ನೇ ಕಳೆದುಕೊಳ್ಳುವ ಹಂತಕ್ಕೆ ತಲುಪುತ್ತಿದೆ.
ಹಾಗೇ ನೋಡಿದರೆ ಈಗ ಅದೆಷ್ಟೋ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್‍ಗಿಂತ ಪ್ರಬಲವಾಗಿವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿದೆ. ಅಮೆರಿಕದಂತಹ ದೇಶವು ಕೋವಿಡ್ ಪರಿಸ್ಥಿತಿಯನ್ನು ನಿರ್ವಹಿಸಲು ಹೆಣಗಾಡುತ್ತಿರುವಾಗ, ನರೇಂದ್ರ ಮೋದಿ ಸರ್ಕಾರವು ಕೋವಿಡ್ ನಂತಹ ಕಠಿಣ ಸವಾಲನ್ನು ದಿಟ್ಟವಾಗಿ ಮತ್ತು ಯಶಸ್ವಿಯಾಗಿ ನಿಭಾಯಿಸಿದೆ ಎಂದು ಹೇಳಿದರು.